ಬಂಟ್ವಾಳ, ಫೆಬ್ರವರಿ 20, 2024 (ಕರಾವಳಿ ಟೈಮ್ಸ್) : ಅಕ್ರಮವಾಗಿ ಲಾರಿಯಲ್ಲಿ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬೇಧಿಸಿದ ಘಟನೆ ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ ಮಂಗಳವಾರ ಮುಂಜಾನೆ ವೇಳೆ ನಡೆದಿದೆ.
ಮಂಗಳವಾರ ಮುಂಜಾನೆ ವೇಳೆ ಲ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಎಸ್ಐ ಮೂರ್ತಿ ಅವರ ನೇತೃತ್ವದ ಪೊಲೀಸರು ನಾವೂರು ಗ್ರಾಮದ ಮಣಿಹಳ್ಳ ಎಂಬಲ್ಲಿ, ಕೆ ಎ 21 ಬಿ 2156 ನೊಂದಣಿಯ ಟಿಪ್ಪರ್ ಲಾರಿಯನ್ನು ತಡೆದು ಪರಿಶೀಲಿಸಿದಾಗ ಈ ಅಕ್ರಮ ಮರಳು ಸಾಗಾಟ ಕೃತ್ಯ ಬೆಳಕಿಗೆ ಬಂದಿದೆ.
ಲಾರಿ ಚಾಲಕನಲ್ಲಿ ಈ ಬಗ್ಗೆ ವಿಚಾರಿಸಿದಾಗ ಯಾವುದೇ ಪರವಾನಿಗೆ ಇಲ್ಲದೆ ವಳಚ್ಚಿಲ್ ಹೊಳೆ ಬದಿಯಲ್ಲಿ ಮರಳು ತುಂಬಿಸಿಕೊಂಡು ಸಾಗಿಸುತ್ತಿರುವುದಾಗಿ ತಿಳಿಸಿದ ಹಿನ್ನಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿ ಚಾಲಕ ಸಮೀರ್ ಹಾಗೂ ಲಾರಿ ಮಾಲಕ ಹಮೀದ್ ಎಂಬವರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment