ಬೆಂಗಳೂರು, ಫೆಬ್ರವರಿ 29, 2024 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ಇಲಾಖೆಯಿಂದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ನೀಡಲ್ಪಡುವ 2024ನೇ ಸಾಲಿನ ಶುಲ್ಕ ಮರುಪಾವತಿ ಯೋಜನೆಯಡಿ ಹಿಂದಿನ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ 50ಕ್ಕಿಂತ ಹೆಚ್ಚಿನ ಅಂಕ ಪಡೆದ ಪಿಯುಸಿ ಹಾಗೂ ಮೇಲ್ಪಟ್ಟು ವ್ಯಾಸಂಗ ಮಾಡುತ್ತಿರುವ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ ಕರ್ನಾಟಕ ಸರಕಾರದ ಎಸ್.ಎಸ್.ಪಿ. ಪೋರ್ಟಲ್ ಮೂಲಕ ಶುಲ್ಕ ಮರುಪಾವತಿಗಾಗಿ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಫೆಬ್ರವರಿ 29 ಇದ್ದ ಕೊನೆ ದಿನಾಂಕವನ್ನು ಮಾರ್ಚ್ 7 ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು.
29 February 2024
- Blogger Comments
- Facebook Comments
Subscribe to:
Post Comments (Atom)
0 comments:
Post a Comment