ಉಪ್ಪಿನಂಗಡಿ, ಫೆಬ್ರವರಿ 26, 2024 (ಕರಾವಳಿ ಟೈಮ್ಸ್) : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೊರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪಿನಂಗಡಿ ನೇತ್ರಾವತಿ ಸೇತುವೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅಮಲು ಪದಾರ್ಥ ಸೇವಿಸಿ ಅನುಚಿತವಾಗಿ ವರ್ತಿಸುತ್ತಿದ್ದವರನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸ್ಸೈ ಅವಿನಾಶ್ ಎಚ್ ನೇತೃತ್ವದ ಪೊಲೀಸರು ಕಡಬ ತಾಲೂಕು ಸವಣೂರು ಗ್ರಾಮದ ನಿವಾಸಿಗಳಾದ ನವಾಝ್ ಮಾಂತೂರು (35) ಹಾಗೂ ಪ್ರಮೋದ್ ಕೆ ಎಂಬವರುಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ನವಾಝ್ ಮಾಂತೂರ್ ಎಂಬಾತ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 24/2024 ಕಲಂ 27(ಎ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ.
ಇನ್ನೊಂದು ಪ್ರಕರಣದಲ್ಲಿ 34ನೇ ನೆಕ್ಕಿಲಾಡಿ ಗ್ರಾಮದ, ನೆಕ್ಕಲಾಡಿ ಜಂಕ್ಷನ್ ಬಳಿ ಮಾದಕ ದ್ರವ್ಯ ಸೇವನೆ ಮಾಡಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಕಡಬ ತಾಲೂಕು, ಸವಣೂರು ಗ್ರಾಮದ ನಿವಾಸಿಗಳಾದ ಪಿ ಹನೀಫ್ (45) ಹಾಗೂ ಮಹಮ್ಮದ್ ಶಾಫಿ (27) ಎಂಬವರುಗಳನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆಯೂ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 25/2024 ಕಲಂ 27 (ಎ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment