ಮೊಗರ್ನಾಡು : ಬೈಕ್ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಚಾರಿ ವೃದ್ದ ಆಸ್ಪತ್ರೆಗೆ - Karavali Times ಮೊಗರ್ನಾಡು : ಬೈಕ್ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಚಾರಿ ವೃದ್ದ ಆಸ್ಪತ್ರೆಗೆ - Karavali Times

728x90

15 February 2024

ಮೊಗರ್ನಾಡು : ಬೈಕ್ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಚಾರಿ ವೃದ್ದ ಆಸ್ಪತ್ರೆಗೆ

ಬಂಟ್ವಾಳ, ಫೆಬ್ರವರಿ 15, 2024 (ಕರಾವಳಿ ಟೈಮ್ಸ್) : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದಲ್ಲದೆ ಬೈಕ್ ಸವಾರ ಕೂಡಾ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಬುಧವಾರ ಸಂಭವಿಸಿದೆ. 

ಗಾಯಾಳು ಪಾದಚಾರಿಯನ್ನು ಧರ್ಣಪ್ಪ (75) ಹಾಗೂ ಬೈಕ್ ಸವಾರನನ್ನು ಮೋಕ್ಷಿತ್ ಎಂದು ಹೆಸರಿಸಲಾಗಿದೆ. ಧರ್ಣಪ್ಪ ಅವರು ಮೊಗರ್ನಾಡು ಎಂಬಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಮೋಕ್ಷಿತ್ ಅವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದು ಗಾಯಗೊಂಡಿದ್ದು, ಬೈಕ್ ಸವಾರ ಕೂಡಾ ಗಾಯಗೊಂಡಿದ್ದಾರೆ. ಧರ್ಣಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದೆ. ಬೈಕ್ ಸವಾರ ಮೋಕ್ಷಿತ್ ಅವರು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮೊಗರ್ನಾಡು : ಬೈಕ್ ಡಿಕ್ಕಿಯಾಗಿ ರಸ್ತೆ ದಾಟಲು ನಿಂತಿದ್ದ ಪಾದಚಾರಿ ವೃದ್ದ ಆಸ್ಪತ್ರೆಗೆ Rating: 5 Reviewed By: karavali Times
Scroll to Top