ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದಂತಿದೆ : ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಚಿವ ರಮಾನಾಥ ರೈ ಲೇವಡಿ - Karavali Times ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದಂತಿದೆ : ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಚಿವ ರಮಾನಾಥ ರೈ ಲೇವಡಿ - Karavali Times

728x90

1 February 2024

ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದಂತಿದೆ : ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಚಿವ ರಮಾನಾಥ ರೈ ಲೇವಡಿ

ಬಂಟ್ವಾಳ, ಫೆಬ್ರವರಿ 01, 2024 (ಕರಾವಳಿ ಟೈಮ್ಸ್) : ಕೇಂದ್ರ ಸರಕಾರದ ಮಧ್ಯಂತರ ಬಜೆಟ್-2024 ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಕಟಕಿಯಾಡಿದ್ದಾರೆ. 

ಪ್ರಗತಿ, ಬೆಳವಣಿಗೆ, ಧ್ಯೇಯ, ಆದ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಹೇಳಿದ್ದರೆ ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ ಮಾಡಿದೆ. ಯುವಕರು, ಅನ್ನದಾತರು, ಬಡವರು, ಮಹಿಳೆಯರಿಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದ್ದಾರೆ. ಆದರೆ ಈ ವರ್ಗಕ್ಕೆ ವಿಶೇಷವಾದ ಘೋಷಣೆ ಮಾಡಿಲ್ಲ. ಅಲ್ಲದೇ ಮೋದಿ ಸರಕಾರದ ಬಜೆಟ್‍ನಲ್ಲಿ ಸಮಗ್ರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಬಜೆಟ್‍ನಲ್ಲಿ ವಿಶೇಷ ಅನಿಸುವಂಥದ್ದು ಏನೂ ಇಲ್ಲ. ಇದು ಮೋದಿ ಸರ್ಕಾರದ ಅಂತಿಮ ಬಜೆಟ್ ಆಗಲಿದೆ ಎಂದು ರಮಾನಾಥ ರೈ ಅಭಿಪ್ರಾಯಪಟ್ಟಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದಂತಿದೆ : ಕೇಂದ್ರ ಬಜೆಟ್ ಬಗ್ಗೆ ಮಾಜಿ ಸಚಿವ ರಮಾನಾಥ ರೈ ಲೇವಡಿ Rating: 5 Reviewed By: karavali Times
Scroll to Top