ಬಂಟ್ವಾಳ, ಫೆಬ್ರವರಿ 02, 2024 (ಕರಾವಳಿ ಟೈಮ್ಸ್) : ಕಾರು ಡಿಕ್ಕಿಯಾಗಿ ಬೈಕ್ ಸವಾರ ದಾರುಣವಾಗಿ ಮೃತಪಟ್ಟು ಕಾರಿನಲ್ಲಿದ್ದ ಮಹಿಳೆ ಹಾಗೂ ಮಗು ಗಾಯಗೊಂಡ ಘಟನೆ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಗುರುವಾರ ಸಂಜೆ ವೇಳೆ ನಡೆದಿದೆ.
ಮೃತ ಬೈಕ್ ಸವಾರನನ್ನು ಬೆಳ್ತಂಗಡಿ ತಾಲೂಕು, ಉಜಿರೆ-ಬಿ ಟಿ ಕ್ರಾಸ್ ನಿವಾಸಿ ಪ್ರದೀಷ್ ಎಂದು ಹೆಸರಿಸಲಾಗಿದೆ.
ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಾರು ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡ ಬೈಕ್ ಸವಾರ ಪ್ರದೀಷ್ ಅವರನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸುವ ವ್ಯವಸ್ಥೆ ಮಾಡಿದರಾದರೂ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಅಪಘಾತದಿಂದ ಕಾರಿನಲ್ಲಿದ್ದ ಮಹಿಳೆ ಹಾಗೂ ಮಗುವಿಗೂ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಕೊಯ್ಯೂರು ನಿವಾಸಿ ಅಮೃತೇಶ್ ಕುಮಾರ್ ಎ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment