ಕಡಬ, ಮಾರ್ಚ್ 04, 2024 (ಕರಾವಳಿ ಟೈಮ್ಸ್) : ಕಡಬ ಸರಕಾರಿ ಪದವಿಪೂರ್ವ ಕಾಲೇಜಿನ ಆವರಣದೊಳಗೆ ಸಮವಸ್ತ್ರ ಧರಿಸಿದ ವ್ಯಕ್ತಿಯೋರ್ವ ವಿದ್ಯಾರ್ಥಿನಿಯೋರ್ವಳ ಮೇಲೆ ಆಸಿಡ್ ಎರಚಿದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದ್ದು, ಆಕೆ ಸಹಿತ ಆಕೆಯ ಹತ್ತಿರದಲ್ಲಿ ಕುಳಿತಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರೂ ಕೂಡಾ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸಿಡ್ ದಾಳಿ ನಡೆಸಿದ ಆರೋಪಿಯನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಆರೋಪಿ ಯುವಕನನ್ನು ಕೇರಳ ಮೂಲದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕು ನಿವಾಸಿ ಅಬೀನ್ (23) ಎಂದು ಗುರುತಿಸಲಾಗಿದೆ. ಆರೋಪಿ ಮತ್ತು ಆಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿರುತ್ತಾರೆ. ಪ್ರಾಥಮಿಕ ತನಿಖೆಯಲ್ಲಿ ಪ್ರೇಮ ವೈಫಲ್ಯದ ಹಿನ್ನಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ತಿಳಿದು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿ ಗುರಿಯಾಗಿಸಿರುವ ವಿದ್ಯಾರ್ಥಿನಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದು, ಆರೋಪಿ ಕೂಡಾ ಎಂಬಿಎ ವಿದ್ಯಾರ್ಥಿಯಾಗಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯ ತಾಯಿ ಮನೆ ಕೂಡಾ ಕೇರಳ ಆಗಿದ್ದು, ಅಕ್ಕಪಕ್ಕದ ಮನೆಯಾಗಿರುವ ಸಾಧ್ಯತೆ ಇರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
0 comments:
Post a Comment