ಬಂಟ್ವಾಳ, ಮಾರ್ಚ್ 11, 2024 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು, ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಠಾಣೆಯಲ್ಲಿ ದಾಖಲಾಗಿರುವ ಅಪರಾಧ ಕ್ರಮಾಂಕ 25/2024 ಕಲಂ 457, 380 ಐಪಿಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ತನಿಖೆ ನಡೆಸಿ ಮೂರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಬಿ ಮೂಡ ಗ್ರಾಮದ ಗೂಡಿನಬಳಿ ಜುಮಾ ಮಸೀದಿ ಹತ್ತಿರದ ನಿವಾಸಿ ಮಹಮ್ಮದ್ ರಫೀಕ್ ಅಲಿಯಾಸ್ ಗೂಡಿನಬಳಿ ರಫೀಕ್ (35), ಕೇರಳ ರಾಜ್ಯದ ಮಂಜೇಶ್ವರ ತಾಲೂಕು, ಉಪ್ಪಳ ಅಂಚೆ ವ್ಯಾಪ್ತಿಯ ಮೊಗ್ರಾಳ-ಬಿಂಗಿನಾನಿ ಮನೆ ನಿವಾಸಿ ಇಬ್ರಾಹಿಂ ಕಲಂದರ್ (41), ಬಾಯಾರು ಗ್ರಾಮದ ಗಾಳಿಯಡ್ಕ ನಿವಾಸಿ ದಯಾನಂದ ಎಸ್ (37) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
0 comments:
Post a Comment