ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ ಪರಿಹರಿಸಲು ಅಧಿವಕ್ತ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ - Karavali Times ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ ಪರಿಹರಿಸಲು ಅಧಿವಕ್ತ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ - Karavali Times

728x90

18 March 2024

ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ ಪರಿಹರಿಸಲು ಅಧಿವಕ್ತ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ

ಬಂಟ್ವಾಳ, ಮಾರ್ಚ್ 18, 2024 (ಕರಾವಳಿ ಟೈಮ್ಸ್) : ಬಂಟ್ವಾಳ ತಹಶೀಲ್ದಾರರ ಕಚೇರಿ ಅವ್ಯವಸ್ಥೆಗಳನ್ನು ಶೀಘ್ರವಾಗಿ ಪರಿಹರಿಸಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಅಖಿಲ ಭಾರತೀಯ ಅಧಿವಕ್ತ ಪರಿಷತ್ ಬಂಟ್ವಾಳ ಘಟಕದ ವತಿಯಿಂದ ತಾಲೂಕು ತಹಸೀಲ್ದಾರ್ ಅರ್ಚನಾ ಭಟ್ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು. 

ನಿಯೋಗದಲ್ಲಿದ್ದ ಹಿರಿಯ ನ್ಯಾಯವಾದಿ ಪ್ರಸಾದ್ ಕುಮಾರ್ ರೈ ಅವರು ತಹಶೀಲ್ದಾರರಿಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಗೆ ಆಗುವ ತೊಂದರೆಗಳ ಬಗ್ಗೆ ವಿವರಿಸಿದರು. ಅಧಿವಕ್ತ ಪರಿಷತ್ ಬಂಟ್ವಾಳ ಘಟಕದ ಉಪಾಧ್ಯಕ್ಷ ಯಶವಂತ ವಿಟ್ಲ, ಪ್ರಧಾನ ಕಾರ್ಯದರ್ಶಿ ಶ್ರೀರಾಮ್ ಪ್ರಭು, ನ್ಯಾಯವಾದಿಗಳಾದ ವೀರೇಂದ್ರ ಎಂ ಸಿದ್ದಕಟ್ಟೆ, ವಿನೋದ್, ಶ್ರೀಕೃಷ್ಣ, ಗಂಗಾಧರ ನಾಯಕ್ ನಿಯೋಗದಲ್ಲಿದ್ದರು. 

ನಿಯೋಗದ ಮನವಿಗೆ ಸ್ಪಂದಿಸಿದ ತಹಶೀಲ್ದಾರ್ ಅರ್ಚನಾ ಭಟ್ ಅವರು ಸಾರ್ವಜನಿಕರಿಗೆ ಅನುಕೂಲವಾಗುವ ಮತ್ತು ಜನ ಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದನೆ ನೀಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಬಂಟ್ವಾಳ ತಾಲೂಕು ಕಚೇರಿಯ ಅಭಿಲೇಖಾಲಯದ ಅವ್ಯವಸ್ಥೆ ಸರಿಪಡಿಸಬೇಕು, ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಆಪೇಕ್ಷಿತ ನಕ್ಷೆಯ ಮುಖಾಂತರ ಭೂ ಪರಿವರ್ತನೆಗೆ ಅವಕಾಶ ಮಾಡಿಕೊಡಬೇಕು,

ಚಿಕ್ಕ ಪುಟ್ಟ ಸಮಸ್ಯೆಗಳ ವಿಲೇವಾರಿಗೆ ತಿಂಗಳಿಗೊಂದು ರೆವೆನ್ಯೂ ಅದಾಲತ್ ನಡೆಸಿ ಸ್ಥಳದಲ್ಲೇ ಪರಿಹಾರ ನೀಡಬೇಕು,

ಅಕ್ರಮ-ಸಕ್ರಮಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಗೆ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳಬೇಕು, ನಮೂನೆ 9 ಮತ್ತು 11  ಆದ ಬಗ್ಗೆ ಪಹಣಿಯಲ್ಲಿ ನಮೂದು ಮಾಡಿ ಅಕ್ರಮಗಳ ತಡೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ತಾಲೂಕು ಕಚೇರಿಯಲ್ಲಿ ಕಡತಗಳ ಶೀಘ್ರ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು, ಪ್ರತಿ ಗ್ರಾಮಕ್ಕೊಂದು ಗ್ರಾಮಕರಣಿಕರನ್ನು ನೇಮಕ ಮಾಡಲು ಕ್ರಮ ಕೈಗೊಂಡು ಸಾರ್ವಜನಿಕರು ತಮ್ಮ ಕೆಲಸಗಳಿಗೆ  ಅಲೆದಾಡುವುದನ್ನು ತಪ್ಪಿಸಲು ಕ್ರಮಕೈಗೊಳ್ಳಬೇಕು, ಕೋರ್ಟ್ ಡಿಕ್ರಿಯ ಆಧಾರದಲ್ಲಿ ಪಹಣಿಯಲ್ಲಿ ಹಕ್ಕುದಾರರ ಹೆಸರನ್ನು ನಮೂದು ಮಾಡಲು ಇರುವ ಸಮಸ್ಯೆಗಳ ಪರಿಹಾರಕ್ಕೆ ಶೀಘ್ರ ಕ್ರಮಕೈಗೊಳ್ಳಬೇಕು ಇತ್ಯಾದಿ ವಿಷಯಗಳ ಬಗ್ಗೆ ನಿಯೋಗ ತಹಶೀಲ್ದಾರರ ಗಮನ ಸೆಳೆಯಿತು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳ ತಾಲೂಕು ಕಚೇರಿ ಅವ್ಯವಸ್ಥೆ ಪರಿಹರಿಸಲು ಅಧಿವಕ್ತ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ Rating: 5 Reviewed By: karavali Times
Scroll to Top