ಪುತ್ತೂರು, ಮಾರ್ಚ್ 29, 2024 (ಕರಾವಳಿ ಟೈಮ್ಸ್) : ದೆಹಲಿ ಪೊಲೀಸ್ ಹೆಸರಲ್ಲಿ ಕರೆ ಮಾಡಿ ಆನ್ ಲೈನ್ ವಂಚನೆ ಮಾಡಿದ್ದು, ಪುತ್ತೂರಿನ ವ್ಯಕ್ತಿ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೋಸ ಹೋಗಿದ್ದಾರೆ.
ಬೊಳುವಾರು ನಿವಾಸಿ ಡಾ ಚಿದಂಬರ ಅಡಿಗ (69) ಅವರ ದೂರವಾಣಿಗೆ ಮಾರ್ಚ್ 28 ರಂದು ಬೆಳಿಗ್ಗೆ ಅಪರಿಚಿತ ವ್ಯಕ್ತಿ ಫೆÇೀನ್ ಕರೆ ಮಾಡಿ ದೆಹಲಿಯಿಂದ ಪೆÇಲೀಸ್ ಮಾತನಾಡುತ್ತಿರುವುದಾಗಿ ತಿಳಿಸಿದ್ದಾನೆ. ನಿಮ್ಮ ಮೇಲೆ ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂದಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕ ಪ್ರಕರಣ ದಾಖಲಾಗಿದೆ. ಅರೆಸ್ಟ್ ಮಾಡಲು ಕೋರ್ಟ್ ನಿಂದ ವಾರಂಟ್ ಆಗಿದೆ. ನೀವು ದೆಹಲಿಯ ಸಿಬಿಐ ಕೋರ್ಟಿಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಲೈನ್ ಮೂಲಕ ಕೋರ್ಟ್ ಕೇಸ್ ನಡೆಸುತ್ತೇವೆ. ನೀವು ನಿಮ್ಮ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ನಾನು ಹೇಳುವ ಅಕೌಂಟ್ ನಂಬ್ರಕ್ಕೆ ವರ್ಗಾವಣೆ ಮಾಡಬೇಕು. ನಿಮ್ಮ ಕೋರ್ಟ್ ಕೇಸ್ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ. ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂದು ತಿಳಿಸಿದ್ದಾನೆ.
ಡಾ ಚಿದಂಬರ ಅವರ ವಿರುದ್ದ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಕೂಡಾ ಅಪರಿಚಿತ ವ್ಯಕ್ತಿ ಅಡಿಗ ಅವರ ವಾಟ್ಸಪ್ ಸಂಖ್ಯೆಗೆ ಕಳುಹಿಸಿದ್ದಾನೆ. ಈ ಅಪರಿಚಿತನ ಮಾತು ನಂಬಿದ ಅಡಿಗೆ ಅವರು ಗಾಬರಿಗೊಂಡು, ತನ್ನ ಬ್ಯಾಂಕ್ ಖಾತೆಯಿಂದ, ಆರ್ ಟಿ ಜಿ ಎಸ್ ಮೂಲಕ ಅಪರಿಚಿತ ವ್ಯಕ್ತಿ ತಿಳಿಸಿದ ಬ್ಯಾಂಕ್ ಖಾತೆಗೆ 16.50 ಲಕ್ಷ ರೂಪಾಯಿ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಸ್ವಲ್ಪ ಹೊತ್ತಿನ ಬಳಿಕ ಸದ್ರಿ ಅದೇ ವ್ಯಕ್ತಿಯು ಮತ್ತೆ ಕರೆ ಮಾಡಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ, ಅನುಮಾನಗೊಂಡ ಡಾ ಅಡಿಗ ಅವರು ದೂರವಾಣಿ ಕರೆ ಕಡಿತಗೊಳಿಸಿ ತನ್ನ ಗೆಳೆಯರೊಂದಿಗೆ ಈ ಬಗ್ಗೆ ವಿಷಯ ಹಂಚಿಕೊಂಡಿದ್ದಾರೆ. ಅದಾಗಲೇ ಅವರಿಗೆ ಆನ್ ಲೈನ್ ಮೋಸದ ಬಗ್ಗೆ ಗೊತ್ತಾಗಿದೆ. ಈ ಬಗ್ಗೆ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 32/2024 ಕಲಂ 406, 419, 420 ಐಪಿಸಿ ಮತ್ತು 66 (ಸಿ), 66 (ಡಿ) ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
0 comments:
Post a Comment