ಬಂಟ್ವಾಳ, ಮಾರ್ಚ್ 25, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಚಾರದ ಉಸ್ತುವಾರಿಯಾಗಿ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ ಅವರನ್ನು ನೇಮಿಸಲಾಗಿದೆ.
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಈ ನೇಮಕ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಕ್ಷೇತ್ರದ ಜೊತೆಗೆ ಹಾಸನ, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೂ ಭೇಟಿ ನೀಡಿ ಚುನಾವಣಾ ಪ್ರಚಾರ ಕೈಗೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಸಹಕರಿವಂತೆ ಅವರು ಆದೇಶದಲ್ಲಿ ಕೋರಿದ್ದಾರೆ.
0 comments:
Post a Comment