ಬೆಂಗಳೂರು, ಮಾರ್ಚ್ 23, 2024 (ಕರಾವಳಿ ಟೈಮ್ಸ್) : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ನೋಂದಾಯಿತ ಕಾರ್ಮಿಕರ ಇಬ್ಬರು ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಪ್ರತಿ ವರ್ಷ ನೀಡಲಾಗುತ್ತಿದ್ದು, ಅದರಂತೆ 2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯ ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (ಎಸ್ ಎಸ್ ಪಿ) ಮೂಲಕ ಮೇ 31ರೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಈಗಾಗಲೇ ಎಸ್ ಎಸ್ ಪಿ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
2023-24ನೇ ಸಾಲಿನಲ್ಲಿ ಅರ್ಹ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು ಎಸ್ ಎಸ್ ಪಿ ತಂತ್ರಾಂಶದ ಮೂಲಕ ನೀಡಲು ಅನುಕೂಲವಾಗುವಂತೆ ಮಂಡಳಿಯಲ್ಲಿ ನೋಂದಾವಣೆಯಾಗಿರುವ ಎಲ್ಲಾ ಕಾರ್ಮಿಕರು ಮಂಡಳಿಯ ಹೊಸ ವೆಬ್ ಸೈಟಿನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ಉಲ್ಲೇಖ ಸಂಖ್ಯೆಯನ್ನು ನಮೂದಿಸಿ ಆಧಾರ್ ಸಂಖ್ಯೆ ಲಿಂಕ್ (ಸೀಡ್) ಮಾಡತಕ್ಕದ್ದು,
ಮಂಡಳಿಯಿಂದ ಶೈಕ್ಷಣಿಕ ಧನ ಸಹಾಯ ಪಡೆಯಲು ಇದು ಅತ್ಯವಶ್ಯಕವಾಗಿರುವುದರಿಂದ ಈಗಾಗಲೇ ಆಧಾರ್ ಸಂಖ್ಯೆಯನ್ನು ಲಿಂಕ್ (ಸೀಡ್) ಮಾಡದೆ ಇರುವ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ಜೂನ್ 30ರೊಳಗೆ ಆಧಾರ್ ಸಂಖ್ಯೆ ಲಿಂಕ್ (ಸೀಡ್) ಮಾಡತಕ್ಕದ್ದು.
ಇದಲ್ಲದೆ ಎಲ್ಲಾ ನೋಂದಾಯಿತ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಎನ್ ಪಿ ಸಿ ಐ ಮ್ಯಾಪಿಂಗ್ ಮಾಡಿಸತಕ್ಕದ್ದು, ಆಧಾರ್ ಸೀಡ್ ಹಾಗೂ ಎನ್ ಪಿ ಸಿ ಐ ಮಾಡಿಸದೆ ಇರುವ ಕಾರ್ಮಿಕರಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಸಾಧ್ಯವಾಗುವುದಿಲ್ಲವಾದ್ದರಿಂದ ಕಡ್ಡಾಯವಾಗಿ ಸೀಡಿಂಗ್ ಮಾಡಿಸತಕ್ಕದ್ದು ಎಂದು ಕಾರ್ಮಿಕ ಇಲಾಖೆಯ ಪ್ರಕಟಣೆ ತಿಳಿಸಿದೆ.
0 comments:
Post a Comment