ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ - Karavali Times

728x90

4 March 2024

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ

ಬಂಟ್ವಾಳ, ಮಾರ್ಚ್ 04, 2024 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯ ಅಪರಾಧ ಕ್ರಮಾಂಕ 32/2019 ಕಲಂ 379 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ, ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ, ಕೊಡ್ಮಣ್ ಗ್ರಾಮದ ನಿವಾಸಿ ನಾರಾಯಣ ಎಂಬವರ ಪುತ್ರ ಜಾರಪ್ಪ ಮುಂಡಾಲ ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. 

ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಸುಜು, ಸಂತೋಷ್, ವಿಜಯಕುಮಾರ ಹಾಗೂ ಸಿದ್ದಪ್ಪ ಅವರು ಕೊಡ್ಮಣ ಎಂಬಲ್ಲಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿದ್ದು, ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಟ್ವಾಳ ಗ್ರಾಮಾಂತರ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top