ಬೆಳ್ತಂಗಡಿ, ಮಾರ್ಚ್ 11, 2024 (ಕರಾವಳಿ ಟೈಮ್ಸ್) : ಬೈಕ್ ಸವಾರನೋರ್ವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿದ ಘಟನೆ ಕಳಿಯಾ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಮಾ 5 ರಂದು ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಾರ್ಚ್ 5 ರಂದು ಬೆಳ್ತಂಗಡಿ ಸಂಚಾರಿ ಪೆÇಲೀಸ್ ಠಾಣಾ ಸಿಬ್ಬಂದಿ ಸುನೀಲ್ ಕುಮಾರ್ ಅವರು ಕಳಿಯಾ ಗ್ರಾಮದ ಗೇರುಕಟ್ಟೆ ಎಂಬಲ್ಲಿ ಸಂಚಾರ ನಿಯಂತ್ರಣ ಕರ್ತವ್ಯ ನಿರ್ವಹಿಸಿಕೊಂಡಿದ್ದಾಗ ಕೆಎ-19 ಇಡಿ-5737 ನೋಂದಣಿ ಸಂಖ್ಯೆಯ ಮೋಟರ್ ಸೈಕಲ್ ಸವಾರ ಹೆಲ್ಮೆಟ್ ಧರಿಸದೇ ವಾಹನ ಸವಾರಿ ಮಾಡಿಕೊಂಡು ಬರುತ್ತಿದ್ದ. ಈತನ ಸಂಚಾರ ಉಲ್ಲಂಘನೆಯ ಬಗ್ಗೆ ಟ್ರಾಫಿಕ್ ಪೊಲೀಸ್ ಸುನೀಲ್ ಕುಮಾರ್ ಅವರು ತನ್ನ ಮೊಬೈಲ್ ಮೂಲಕ ಫೆÇೀಟೋ ತೆಗೆದಿರುತ್ತಾರೆ. ಈ ಬಗ್ಗೆ ಅಕ್ಷೇಪಿಸಿದ ಬೈಕ್ ಸವಾರ ಬೈಕ್ ಸವಾರ ಪೊಲೀಸ್ ಸಿಬ್ಬಂದಿಯ ಸರಕಾರಿ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಅವ್ಯಾಚವಾಗಿ ಬೈದು, ಹಲ್ಲೆ ನಡೆಸಿರುತ್ತಾನೆ. ಬಳಿಕ ಜೀವಬೆದರಿಕೆ ಒಡ್ಡಿರುತ್ತಾನೆ ಎಂದು ಪೊಲೀಸ್ ಸಿಬ್ಬಂದಿ ಸುನಿಲ್ ಕುಮಾರ್ ನೀಡಿದ ದೂರಿನಂತೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 29/2024 ಕಲಂ 504, 323, 506, 353 ಐಪಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
0 comments:
Post a Comment