ಬೆಳ್ತಂಗಡಿ, ಮಾರ್ಚ್ 20, 2024 (ಕರಾವಳಿ ಟೈಮ್ಸ್) : ಅಕ್ರಮ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ನಡೆಸಿದ ವೇಣೂರು ಪೊಲೀಸರು ಮದ್ಯವನ್ನು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು, ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿ, ಸ್ಥಳೀಯ ನಿವಾಸಿ ಸತೀಶ್ (40) ಎಂಬಾತ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ವೇಣೂರು ಪೆÇಲೀಸ್ ಠಾಣಾ ಪಿಎಸ್ಸೈ ಶ್ರೀಶೈಲ ಡಿ ಮುರಗೋಡ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿತನ ವಶದಲ್ಲಿದ್ದ 90 ಎಂ.ಎಲ್. ಮದ್ಯ ತುಂಬಿದ 32 ಸ್ಯಾಚೆಟ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮದ್ಯದ ಒಟ್ಟು ಪ್ರಮಾಣ 2.880 ಲೀಟರ್ ಆಗಿದ್ದು, ಅಂದಾಜು ಮೌಲ್ಯ ರೂ 1,312/- ರೂಪಾಯಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ವೇಣೂರು ಪೆÇಲೀಸ್ ಠಾಣೆಯಲ್ಲಿ ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ದಾಳಿ ನಡೆಸಿದ ಪೂಂಜಾಲಕಟ್ಟೆ ಪೊಲೀಸರು ಅಕ್ರಮ ಮದ್ಯ ಮಾರಾಟ ಪ್ರಕರಣ ಬೇಧಿಸಿ ಆರೋಪಿ ಸಹಿತ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಬೆಳ್ತಂಗಡಿ ತಾಲೂಕು ತಣ್ಣೀರುಪಂಥ ಗ್ರಾಮದ ಅಳಕೆ-ಮಡ್ಯೊಟ್ಟು ಎಂಬಲ್ಲಿ ಆರೋಪಿ ಬಿರ್ಮಣ್ಣ ಗೌಡ ಎಂಬಾತ ಕುಂಞಪ್ಪ ಮೂಲ್ಯ ಎಂಬವರ ವಾಣಿಜ್ಯ ಸಂಕೀರ್ಣದ ಬದಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೂಂಜಾಲಕಟ್ಟೆ ಪಿಎಸ್ಸೈ ಉದಯ ರವಿ ಎಂ ವೈ ನೇತೃತ್ವದ ಪೊಲೀಸರು ಈ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಆರೋಪಿಯನ್ನು ವಶಕ್ಕೆ ಪಡೆದು, ಆರೋಪಿ ಮಾರಾಟ ಮಾಡುತ್ತಿದ್ದ 180 ಎಂ ಎಲ್ ನ 17 ಸ್ಯಾಚೆಟ್ ಒಟ್ಟು 3.06 ಲೀಟರ್ ಮದ್ಯವನ್ನು ಸ್ವಾದೀನಪಡಿಸಿಕೊಂಡಿದ್ದಾರೆ. ಸ್ವಾದೀನಪಡಿಸಿಕೊಂಡ ಮದ್ಯದ ಒಟ್ಟು ಮೌಲ್ಯ 2,074/- ರೂಪಾಯಿ ಆಗಬಹುದು. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಪ್ರಕರಣ ದಾಖಲಾಗಿದೆ.
0 comments:
Post a Comment