ಸುಳ್ಯ, ಮಾರ್ಚ್ 06, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಸುಳ್ಯ ಪೊಲೀಸರು ಲಾರಿ ಸಹಿತ ಮರಳನ್ನು ವಶಪಡಿಸಿಕೊಂಡ ಘಟನೆ ಆರಂತೋಡು ಜಂಕ್ಷನ್ನಿನಲ್ಲಿ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.
ಕಾರ್ಯಾಚರಣೆ ವೇಳೆ ಲಾರಿ ಚಾಲಕ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ. ಮಂಗಳವಾರ ಬೆಳಿಗ್ಗಿನ ಜಾವ ಸುಳ್ಯ ಅರಂತೋಡು ಜಂಕ್ಷನ್ ಎಂಬಲ್ಲಿ ಕೆಎ 21 ಸಿ 4509 ನೊಂದಣಿ ಸಂಖ್ಯೆಯ ಟಿಪ್ಪರ್ ಲಾರಿಯನ್ನು ತಪಾಸಣೆಗಾಗಿ, ಸುಳ್ಯ ಪೆÇಲೀಸ್ ಠಾಣಾ ಪಿಎಸ್ಸೈ ಸರಸ್ವತಿ ಬಿ ಟಿ ಅವರ ನೇತೃತ್ವದ ಪೊಲೀಸರು ತಡೆದಿದ್ದಾರೆ. ಈ ವೇಳೆ ಲಾರಿ ಚಾಲಕ ಲಾರಿಯನ್ನು ನಿಲ್ಲಿಸಿ ಪರಾರಿಯಾಗಿರುತ್ತಾನೆ. ಬಳಿಕ ಟಿಪ್ಪರ್ ಲಾರಿಯನ್ನು ಪೊಲೀಸರು ಪರಿಶೀಲನೆ ನಡೆಸಿದ ವೇಳೆ ಲಾರಿಯಲ್ಲಿ ಸುಮಾರು ಸುಮಾರು 5 ಸಾವಿರ ಮೌಲ್ಯದ 3 ಮೆಟ್ರಿಕ್ ಟನ್ ತೂಕದ ಮರಳು ಪತ್ತೆಯಾಗಿದೆ.
ಸದ್ರಿ ಲಾರಿಯಲ್ಲಿ ಮರಳು ಸಾಗಾಟಕ್ಕೆ ಸಂಬಂಧಿಸಿದ ಯಾವುದೇ ಪರವಾನಿಗೆ ಕಂಡುಬಾರದ ಹಿನ್ನೆಲೆಯಲ್ಲಿ ಮುಂದಿನ ಕಾನೂನು ಕ್ರಮಕ್ಕಾಗಿ ಲಾರಿಯನ್ನು ವಶಕ್ಕೆ ಪಡೆದು ಸುಳ್ಯ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2024 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment