ಬೆಂಗಳೂರು, ಎಪ್ರಿಲ್ 09, 2024 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಎಪ್ರಿಲ್ 10 ರಂದು (ನಾಳೆ) ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ-1ನ್ನು ಮಾರ್ಚ್ 1 ರಿಂದ 22ರವರೆಗೆ ನಡೆಸಲಾಗಿತ್ತು. ಈಗಾಗಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬುಧವಾರ ಬೆಳಿಗ್ಗೆ 10 ಗಂಟೆಗೆ ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುವುದು. ಬೆಳಿಗ್ಗೆ 11 ಗಂಟೆ ನಂತರ ಮಂಡಳಿಯ ಅಧಿಕೃತ ವೆಬ್ ಸೈಟಿನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂಧು ಮಲ್ಲೇಶ್ವರಂನಲ್ಲಿರುವ ಪರೀಕ್ಷಾ ಮಂಡಳಿ ಪ್ರಕಟನೆ ಹೊರಡಿಸಿ ಮಾಹಿತಿ ನೀಡಿದೆ.
ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು https://karesults.nic.in ವೆಬ್ ಸೈಟಿಗೆ ಭೇಟಿ ನೀಡಿ ವೀಕ್ಷಿಸಬಹುದು. ರಾಜ್ಯದಾದ್ಯಂತ ಸುಮಾರು 6.9 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆದಿದ್ದರು.
0 comments:
Post a Comment