ಸುಬ್ರಹ್ಮಣ್ಯ, ಎಪ್ರಿಲ್ 24, 2024 (ಕರಾವಳಿ ಟೈಮ್ಸ್) : ಕೆ ಎಸ್ ಆರ್ ಟಿ ಸಿ ಬಸ್ಸಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಬಳಿಯ ಕಾಶಿಕಟ್ಟೆ ಎಂಬಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರು ಮೂಲದ ಮಂಜುನಾಥ ಎಂದು ಹೆಸರಿಸಲಾಗಿದೆ. ಇವರು ತಮ್ಮ ಪತ್ನಿ ನೇತ್ರಾವತಿ ಎಂಬವರ ಜೊತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಲು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದ ಚಾಲನೆ ಹಾಗೂ ನಿರ್ವಾಹಕ ಬಸ್ಸಿನ ಬಾಗಿಲು ಸರಿಯಾಗಿ ಹಾಕದೆ ಇದ್ದ ಪರಿಣಾಮ ಮಂಜುನಾಥ ಅವರು ಬಸ್ಸಿನಿಂದ ಕೆಳಕ್ಕೆ ಬಿದ್ದು ಈ ಅವಘಡ ಸಂಭವಿಸಿದೆ.
ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಮಂಜುನಾಥ ಅವರನ್ನು ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಅವರ ಪುತ್ರ ರಂಜನ್ ಬಿ ಎಂ ಅವರು ನೀಡಿದ ದೂರಿನಂತೆ ಸುಬ್ರಹ್ಮಣ್ಯ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment