ಬಂಟ್ವಾಳ, ಎಪ್ರಿಲ್ 19, 2024 (ಕರಾವಳಿ ಟೈಮ್ಸ್) : ಪಾಣೆಮಂಗಳೂರು ಸಮೀಪದ ಬೋಗೋಡಿ ನಿವಾಸಿ ದಿವಂಗತ ಅಬ್ದುಲ್ ಖಾದರ್ ಕಲ್ಲಡ್ಕ ಅವರ ಪತ್ನಿ ಐಸಮ್ಮ ಯಾನೆ ಅಚ್ಚ (70) ಅವರು ಹಠಾತ್ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಮಧ್ಯಾಹ್ನ ವೇಳೆ ನಿಧನರಾದರು.
ಗುರುವಾರ ರಾತ್ರಿ ಆಲಡ್ಕ ಮಗಳ ಮನೆಯಲ್ಲಿದ್ದು, ಎಂದಿನಂತೆ ಊಟ ಮಾಡಿ ಮಲಗಿದ್ದರು. ಶುಕ್ರವಾರ ಬೆಳಿಗ್ಗೆ ರಕ್ತದೊತ್ತಡ ಕಡಿಮೆಯಾಗಿ ಹಠಾತ್ ಅನಾರೋಗ್ಯ ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಿ ಸಿ ರೋಡಿನ ಖಾಸಗಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕಂಕನಾಡಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ 12 ಗಂಟೆ ವೇಳೆಗೆ ಮೃತಪಟ್ಟರು.
ಮೃತರು ಮೂವರು ಪುತ್ರರು, ನಾಲ್ಕು ಮಂದಿ ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಶುಕ್ರವಾರ ಮಗ್ರಿಬ್ ವೇಳೆಗೆ ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ದಫನ ಕಾರ್ಯ ನೆರವೇರಿಸಲಾಗಿದೆ.
0 comments:
Post a Comment