ಬಂಟ್ವಾಳ, ಎಪ್ರಿಲ್ 14, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ.
ಗಾಯಾಳು ಸ್ಕೂಟರ್ ಸವಾರನನ್ನು ಸಫ್ವಾನ್ ಎಂದು ಹೆಸರಿಸಲಾಗಿದೆ. ಸಫ್ವಾನ್ ಸ್ಕೂಟರಿನಲ್ಲಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಸಹಸವಾರನಾಗಿ ಕುಳ್ಳಿರಿಸಕೊಂಡು ಸಂಚರಿಸುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸಮೇತ ಸವಾರರು ರಸ್ತೆಗೆ ಬಿದ್ದಿದ್ದು, ಸವಾರ ಸಫ್ವಾನ್ ಗಾಯಗೊಂಡಿದ್ದಾರೆ. ಗಾಯಾಳು ಸಫ್ವಾನ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಹಸವಾರ ಮುಝಮಿಲ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment