ಮನೆಯಿಂದಲೇ ಮತ ಚಲಾಯಿಸಿದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ 87 ವರ್ಷ ಪ್ರಾಯದ ಜನಾರ್ದನ ಪೂಜಾರಿ - Karavali Times ಮನೆಯಿಂದಲೇ ಮತ ಚಲಾಯಿಸಿದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ 87 ವರ್ಷ ಪ್ರಾಯದ ಜನಾರ್ದನ ಪೂಜಾರಿ - Karavali Times

728x90

16 April 2024

ಮನೆಯಿಂದಲೇ ಮತ ಚಲಾಯಿಸಿದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ 87 ವರ್ಷ ಪ್ರಾಯದ ಜನಾರ್ದನ ಪೂಜಾರಿ

ಬಂಟ್ವಾಳ, ಎಪ್ರಿಲ್ 16, 2024 (ಕರಾವಳಿ ಟೈಮ್ಸ್) : ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ ಬಾರಿಯಂತೆ ಸೆಕ್ಟರ್ ಅಧಿಕಾರಿಗಳ ನೇತೃತ್ವದಲ್ಲಿ ಮತಗಟ್ಟೆ ಅಧಿಕಾರಿಗಳ ತಂಡ ಮನೆ-ಮನೆಗೆ ತೆರಳಿ ಮತದಾನ ಮಾಡಿಸುತ್ತಿದ್ದು, ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ ಬಿ ಜನಾರ್ದನ ಪೂಜಾರಿ ಅವರ ಬಿ ಮೂಡ ಗ್ರಾಮದ ಬಸ್ತಿಪಡ್ಪುವಿನ ಮನೆಗೆ ಮಂಗಳವಾರ ತೆರಳಿದ ಅಧಿಕಾರಿಗಳ ತಂಡ ಅಂಚೆ ಮತದಾನ ಪ್ರಕ್ರಿಯೆ ನಡೆಸಿದರು. 

ಮತದಾರರ ಪಟ್ಟಿಯಂತೆ ಪೂಜಾರಿ ಅವರಿಗೆ 87 ವರ್ಷ ವಯಸ್ಸಾಗಿದ್ದು, ಅವರು ಈ ಹಿಂದೆ ಭಂಡಾರಿಬೆಟ್ಟು ಶಾಲೆಯ ಭಾಗಸಂಖ್ಯೆ 130 ಮತಗಟ್ಟೆಗೆ ತೆರಳಿ ಮತದಾನ ಮಾಡುತ್ತಿದ್ದರು. 

ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40ಕ್ಕಿಂತ ಹೆಚ್ಚಿನ ಅಂಗವೈಕಲ್ಯತೆ ಹೊಂದಿದ ಮತದಾರರ ಮನೆಗಳಿಗೆ ಮತಗಟ್ಟೆ ಅಧಿಕಾರಿಗಳ ತಂಡವು ತೆರಳಿ ಮತದಾನ ಮಾಡಿಸುವ ಪ್ರಕ್ರಿಯೆ ಸೋಮವಾರದಿಂದ ಆರಂಭಗೊಂಡಿದ್ದು, ಬುಧವಾರದವರೆಗೂ ಈ ಪ್ರಕ್ರಿಯೆ ಮುಂದುವರಿಯಲಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮನೆಯಿಂದಲೇ ಮತ ಚಲಾಯಿಸಿದ ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ಸಿಗ 87 ವರ್ಷ ಪ್ರಾಯದ ಜನಾರ್ದನ ಪೂಜಾರಿ Rating: 5 Reviewed By: karavali Times
Scroll to Top