ಬಂಟ್ವಾಳ, ಎಪ್ರಿಲ್ 21, 2024 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿ ಮೃತಪಟ್ಟ ಘಟನೆ ತುಂಬೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಮೃತ ಪಾದಚಾರಿ ವ್ಯಕ್ತಿಯನ್ನು ನಾಗರಾಜ (55) ಎಂದು ಹೆಸರಿಸಲಾಗಿದೆ. ನಾಗರಾಜ್ ಅವರು ರಸ್ತೆ ಬದಿಯ ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಬೆ ವೈಶಾಲಿ ವೈನ್ ಶಾಪ್ ಎದುರು ದೀಪಕ್ ಶೆಟ್ಟಿ ಎಂಬವರು ಚಲಾಯಿಸಿಕೊಂಡು ಬಂದ ಬೈಕ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಪಾದಚಾರಿ ನಾಗರಾಜ್ ಹಾಗೂ ಬೈಕ್ ಸವಾರ ದೀಪಕ್ ಶೆಟ್ಟಿ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ತಕ್ಷಣ ಇಬ್ಬರನ್ನು ಸ್ಥಳೀಯರು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಗಂಭೀರ ಗಾಯಗೊಂಡಿದ್ದ ನಾಗರಾಜ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಘಟನೆಗೆ ಬೈಕ್ ಸವಾರ ದೀಪಕ್ ಶೆಟ್ಟಿ ಅವರ ದುಡುಕುತನ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಕಾರಣ ಎನ್ನಲಾಗಿದ್ದು, ಈ ಬಗ್ಗೆ ತುಂಬೆ ನಿವಾಸಿ ಅಬ್ದುಲ್ ಕರೀಂ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment