ಬಂಟ್ವಾಳ, ಎಪ್ರಿಲ್ 23, 2024 (ಕರಾವಳಿ ಟೈಮ್ಸ್) : ಕಾರುಗಳ ಮಧ್ಯೆ ಅಪಘಾತ ಸಂಭವಿಸಿ ಕಾರು ಜಖಂಗೊಂಡಿದ್ದಲ್ಲದೆ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಪಾಣೆಮಂಗಳೂರು ಸಮೀಪದ ಬೋಳಂಗಡಿ ನರಹರಿ ಪರ್ವತ ಬಳಿ ಸೋಮವಾರ ಮಧ್ಯಾಹ್ನ ವೇಳೆ ನಡೆದಿದೆ.
ಬೆಂಗಳೂರು ಮೂಲದ ನಿವಾಸಿ ಶ್ರೀಕಾಂತ್ (37) ಅವರು ಸೋಮವಾರ ಮಧ್ಯಾಹ್ನ ಕಾರಿನಲ್ಲಿ ಬರುತ್ತಿದ್ದ ವೇಳೆ ಪಾಣೆಮಂಗಳೂರು ಸಮೀಪದ ಬೋಳಂಗಡಿ ನರಹರಿ ಪರ್ವತ ಬಳಿ ಗೋಪಾಲ ಎ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಘಟನೆಯಿಂದ ಕಾರು ಜಖಂಗೊಂಡಿದ್ದು, ಯಾರಿಗೂ ಗಾಯಗಳಾಗಿಲ್ಲ. ಅಪಘಾತದಿಂದ ಹೆದ್ದಾರಿಯಲ್ಲಿ ಕೆಲಕಾಲ ಟ್ರಾಫಿಕ್ ಜಾಂ ಉಂಟಾಗಿತ್ತು. ಈ ಬಗ್ಗೆ ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment