ಬಂಟ್ವಾಳ, ಎಪ್ರಿಲ್ 17, 2024 (ಕರಾವಳಿ ಟೈಮ್ಸ್) : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಇತ್ತೀಚೆಗೆ ಗ್ಯಾರಂಟಿ ವಿಮರ್ಶಿಸುವ ಭರದಲ್ಲಿ ಮಹಿಳೆಯರಿಗೆ ಅವಮಾನಿಸುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ಮಹಿಳಾ ಕಾಂಗ್ರೆಸ್ ವತಿಯಿಂದ ಬಿ ಸಿ ರೋಡಿನಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ ರಮಾನಾಥ ರೈ ಅವರು, ಬಿಜೆಪಿ ಹಿಂದಿನಿಂದಲೂ ಮಹಿಳೆಯರನ್ನು ಮಾತೆ ಮಾತೆ ಎನ್ನುತ್ತಲೇ ಅವಮಾನಿಸುತ್ತಲೇ ಬಂದಿದ್ದಾರೆ. ಇದೀಗ ಬಿಜೆಪಿ ಜೊತೆ ಸೇರಿರುವ ಜೆಡಿಎಸ್ ನಾಯಕರು ಕೂಡಾ ಅದೇ ಸಾಲಿಗೆ ಸೇರಿದ್ದಾರೆ ಎಂದು ಕಿಡಿ ಕಾರಿದರು. ಜನವಿರೋಧಿಯಾಗಿ ತಮ್ಮ ಕುಟುಂಬ ಉದ್ದಾರ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಮಹಿಳಾ ಕಾಂಗ್ರೆಸ್ ಪ್ರಮುಖರಾದ ಜಯಂತಿ ಪೂಜಾರಿ, ಮಲ್ಲಿಕಾ ಶೆಟ್ಟಿ, ಫ್ಲೋಸಿ ಡಿ ಸೋಜ, ಜೋಸ್ಫಿನ್ ಡಿ ಸೋಜ, ಪಕ್ಷ ಪ್ರಮುಖರಾದ ಎಂ ಅಶ್ವನಿ ಕುಮಾರ್ ರೈ, ಸುದೀಪ್ ಕುಮಾರ್ ಶೆಟ್ಟಿ, ಚಂದ್ರಪ್ರಕಾಶ್ ಶೆಟ್ಟಿ, ಬಿ ಎಂ ಅಬ್ಬಾಸ್ ಅಲಿ, ಸದಾಶಿವ ಬಂಗೇರ, ಪದ್ಮಶೇಖರ್ ಜೈನ್ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
0 comments:
Post a Comment