ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ - Karavali Times ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ - Karavali Times

728x90

11 April 2024

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ

ಮಂಗಳೂರು, ಎಪ್ರಿಲ್ 11, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಅನುಮೋದನೆಯೊಂದಿಗೆ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಪಕ್ಷದ ಮುಖಂಡರನ್ನು ಸಂಯೋಜಕರನ್ನಾಗಿ ನೇಮಿಸಿ ಆದೇಶಿಸಲಾಗಿದೆ.

205-ಬಂಟ್ವಾಳ ಕ್ಷೇತ್ರಕ್ಕೆ ಮಾಜಿ ಮೇಯರ್ ಶಶಿಧರ್ ಹೆಗ್ಡೆ, 201-ಮೂಡಬಿದ್ರೆ ಕ್ಷೇತ್ರಕ್ಕೆ ಮಾಜಿ ಮೇಯರ್ ಮಹಾಬಲ ಮಾರ್ಲ, ಕಾಪೆರ್Çರೇಟರ್ ಅನಿಲ್ ಕುಮಾರ್, 207-ಸುಳ್ಯ ಕ್ಷೇತ್ರಕ್ಕೆ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಮಮತಾ ಡಿ ಎಸ್ ಗಟ್ಟಿ, 202-ಮಂಗಳೂರು ಉತ್ತರ ಕ್ಷೇತ್ರಕ್ಕೆ ಕಾಪೆರ್Çರೇಟರ್ ಅಬ್ದುಲ್ ರವೂಫ್, 203-ಮಂಗಳೂರು ದಕ್ಷಿಣ ಕ್ಷೇತ್ರಕ್ಕೆ ಸಂತೋಷ್ ಕುಮಾರ್ ಶೆಟ್ಟಿ, ಲಾರೆನ್ಸ್ ಡಿ’ಸೋಜ, 200-ಬೆಳ್ತಂಗಡಿ ಕ್ಷೇತ್ರಕ್ಕೆ ಮಾಜಿ ಕಾಪೆರ್Çರೇಟರ್ ಪ್ರತಿಭಾ ಕುಳಾಯಿ, 204-ಮಂಗಳೂರು ಕ್ಷೇತ್ರಕ್ಕೆ ಕೆಪಿಸಿಸಿ ಸದಸ್ಯೆ ಎಸ್. ಅಪ್ಪಿ, ಕಾಪೆರ್Çರೇಟರ್ ಅಶ್ರಫ್ ಬಜಾಲ್, 206-ಪುತ್ತೂರು ಕ್ಷೇತ್ರಕ್ಕೆ ಆರ್ ಜಿ ಪಿ ಆರ್ ಎಸ್ ಅಧ್ಯಕ್ಷ ಸುಭಾಷ್ ಚಂದ್ರ ಶೆಟ್ಟಿ ಕೊಳ್ನಾಡು, ಅಲ್ತಾಫ್ ಮೊಹಮ್ಮದ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ ಸಿ ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್ ಸಂಯೋಜಕರ ನೇಮಕ Rating: 5 Reviewed By: karavali Times
Scroll to Top