ಬಂಟ್ವಾಳ, ಎಪ್ರಿಲ್ 10, 2024 (ಕರಾವಳಿ ಟೈಮ್ಸ್) : ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಅವೈಜ್ಞಾನಿಕವಾಗಿ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರು ಹಾಗೂ ಹೆದ್ದಾರಿ ಗಸ್ತು ತಂಡದ ಮಧ್ಯೆ ಚಕಮಕಿ ಹೊಡೆದಾಟ ನಡೆದ ಘಟನೆ ಬಿ ಸಿ ರೋಡು ಸಮೀಪದ ಕೆ ಎಸ್ ಆರ್ ಟಿ ಸಿ ಡಿಪೋ ಬಳಿ ಮಂಗಳವಾರ ಸಂಜೆ ನಡೆದಿದ್ದು, ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ದೂರು-ಪ್ರತಿದೂರು ದಾಖಲಾಗಿದೆ.
ಈ ಬಗ್ಗೆ ಬಂಟ್ವಾಳ ನಗರ ಠಾಣೆಗೆ ದೂರು ನೀಡಿರುವ ರಾಷ್ಟ್ರೀಯ ಹೆದ್ದಾರಿ ಗಸ್ತು ತಂಡದ ಸಿಬ್ಬಂದಿ, ಉಡುಪಿ ಜಿಲ್ಲೆ, ಕುಂದಾಪುರ ತಾಲುಕು, ಶಿಲೂರು-ಬೈಂದೂರು ನಿವಾಸಿ ಚಂದ್ರ ಶೇಷ ಮರಾಠಿ (27) ಅವರು ಮಂಗಳವಾರ ಸಂಜೆ ಇವರು ಗಸ್ತು ಮಾಡುತ್ತಿರುವ ವೇಳೆ ಬಿ ಸಿ ರೋಡು ಕೆ ಎಸ್ ಆರ್ ಟಿ ಸಿ ಡಿಪೆÇೀ ಬಳಿ, ಸುಮಾರು 20ಕ್ಕೂ ಹೆಚ್ಚು ಮಂದಿ ನಾಗರೀಕರು ಕ್ಷುಲ್ಲಕ ಕಾರಣಕ್ಕೆ ಚಂದ್ರಶೇಷ ಅವರ ಜೊತೆ ಇದ್ದ ಮೂರು ಜನರ ಜೊತೆ ಜಗಳ ಮಾಡಿ, ದಾಳಿ ಮಾಡಲು ಪ್ರಯತ್ನಿಸಿ ಕೈಗಳಿಂದ ಹಲ್ಲೆ ನಡೆಸಿದ್ದಲ್ಲದೆ ಗಸ್ತು ವಾಹನವನ್ನು ಕಲ್ಲು ಹೊಡೆದು ಜಖಂಗೊಳಿಸಿದ್ದಾರೆ. ವಾಹನದಲ್ಲಿದ್ದವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುತ್ತಾರೆ ಎಂದು ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 70/2024 ಕಲಂ 143, 147, 323, 324, 324, 427 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಪ್ರತಿದೂರು ದಾಖಲಿಸಿರುವ ಬಿ ಮೂಡ ನಿವಾಸಿ ಅಬ್ದುಲ್ ಸಮದ್ ಅವರು, ಮಂಗಳವಾರ ಸಂಜೆ ಬಿ ಮೂಡ ಗ್ರಾಮದ, ಶಾಂತಿಯಂಗಡಿ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದಾಗ, ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಕಾಮಗಾರಿ ಮಾಡಿ ಧೂಳೆಬ್ಬಿಸಿದ್ದು, ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗಿ, ಅಪಘಾತಗಳು ಸಂಭವಿಸಿರುತ್ತದೆ ಎಂದು ರಾಷ್ಟ್ರೀಯ ಹೆದ್ದಾರಿ ಗಸ್ತು ಕರ್ತವ್ಯ ನಿರ್ವಹಿಸುವವರ ಬಳಿ ಪ್ರಶ್ನಿಸಿರುತ್ತಾರೆ. ಈ ವೇಳೆ ರಾಷ್ಟ್ರೀಯ ಹೆದ್ದಾರಿ ಕೆಲಸ ಮಾಡುತ್ತಿರುವವರು ಸಮದ್ ಹಾಗೂ ಇತರರಿಗೆ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಲಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಅಪರಾಧ ಕ್ರಮಾಂಕ 71/2024 ಕಲಂ 324, 504, 506 ಜೊತೆ 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ. ಎರಡೂ ಪ್ರಕರಣಗಳನ್ನು ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment