ಬಂಟ್ವಾಳ, ಎಪ್ರಿಲ್ 19, 2024 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರ ಉಸ್ತುವಾರಿ, ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ ರಮಾನಾಥ ರೈ, ಚುನಾವಣಾ ವಾರ್ ರೂಂ ಮುಖ್ಯಸ್ಥ ಜೊತೆಗಿದರು. ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಲವೀನಾ ವಿಲ್ಮಾ ಮೋರಸ್ ಹಾಗೂ ಜಯಂತಿ ವಿ ಪೂಜಾರಿ, ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ್ ಜೈನ್, ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಮನಪಾ ಸದಸ್ಯ ವಿನಯರಾಜ್, ಪ್ರಮುಖರಾದ ಶುಭಾಶ್ಚಂದ್ರ ಶೆಟ್ಟಿ ಕೊಳ್ನಾಡು, ಪದ್ಮನಾಭ ರೈ, ಇಬ್ರಾಹಿಂ ನವಾಝ್ ಬಡಕಬೈಲು, ಮಲ್ಲಿಕಾ ವಿ ಶೆಟ್ಟಿ, ಮಾಯಿಲಪ್ಪ ಸಾಲ್ಯಾನ್, ಸುದರ್ಶನ್ ಜೈನ್ ಮೊದಲಾದವರು ಭಾಗವಹಿಸಿದ್ದರು.
0 comments:
Post a Comment