ಬಂಟ್ವಾಳ, ಎಪ್ರಿಲ್ 23, 2024 (ಕರಾವಳಿ ಟೈಮ್ಸ್) : ರಾಜ್ಯಾದ್ಯಂತ ಕಾಂಗ್ರೆಸ್ ಪರವಾದ ಫಲಿತಾಂಶ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬರಲಿದ್ದು, ದಕ್ಷಿಣ ಕನ್ನಡ ಕ್ಷೇತ್ರದಲ್ಲೂ ನಿಷ್ಕಳಂಕ ವ್ಯಕ್ತಿತ್ವದ ಅಜಾತ ಶತ್ರು ಆಗಿರುವ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಅವರು ಪ್ರಚಂಡ ಬಹುಮತದಿಂದ ಜಯಗಳಿಸುವುದು ನಿಶ್ಚಯವಾಗಿದೆ ಎಂದು ಬಂಟ್ವಾಳ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿ, ಕೆಪಿಸಿಸಿ ಸದಸ್ಯ, ಜಿ ಪಂ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ವಿಶ್ವಾಸ ವ್ಯಕ್ತಪಡಿದ್ದಾರೆ.
ಕಳೆದ ಬಾರಿಯ ವಿಧಾನಸಭಾ ಚುನಾವಣೆಯ ಸಂದರ್ಭ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಾಸವಿಲ್ಲದೆ ಅಪಸ್ವರ ಎತ್ತಿ ಕಾಂಗ್ರೆಸ್ ಪಕ್ಷದ ಪರವಾಗಿ ಮತ ಚಲಾಯಿಸದ ಮತದಾರರು ಸರಕಾರ ಕೊಟ್ಟ ಮಾತಿಗೆ ಬದ್ದತೆ ಪ್ರದರ್ಶಿಸಿ ಜನಪರ ಯೋಜನೆಗಳನ್ನು ತಕ್ಷಣ ಜಾರಿಗೊಳಿಸಿದ ಪರಿಣಾಮ ಬಳಿಕ ತೀವ್ರ ಬೇಸರ ವ್ಯಕ್ತಪಡಿಸುತ್ತಿರುವುದು ಕ್ಷೇತ್ರ ಸಂಚಾರದ ವೇಳೆ ತಿಳಿದು ಬಂದಿದೆ. ಈ ನಿಟ್ಟಿನಲ್ಲಿ ನಾಳೆ (ಎ 24) ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಉಸ್ತುವಾರಿ, ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ, ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ರಾಮಯ್ಯ ಪರವಾಗಿ ನಡೆಯುವ ಮೆಲ್ಕಾರಿನಿಂದ ಬೃಹತ್ ರೋಡ್ ಶೋ ಹಾಗೂ ಸಜಿಪಮೂಡ ಗ್ರಾಮದ ಸುಭಾಶ್ ನಗರ (ಬೇಂಕೆ) ಜಂಕ್ಷನ್ನಿನ ಕರ್ನಾಟಕ ಬ್ಯಾಂಕ್ ಮುಂಭಾಗದಲ್ಲಿ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಮತದಾರರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಹಾಗೂ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸುವಂತೆ ಪತ್ರಿಕಾ ಹೇಳಿಕೆಯಲ್ಲಿ ಕೋರಿದ್ದಾರೆ.
0 comments:
Post a Comment