ಬಂಟ್ವಾಳ, ಎಪ್ರಿಲ್ 21, 2024 (ಕರಾವಳಿ ಟೈಮ್ಸ್) : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಮಹಾವೀರ ಜಯಂತಿ ಆಚರಣೆಯನ್ನು ಬಿ ಸಿ ರೋಡಿನ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಭಾನುವಾರ ಆಚರಿಸಲಾಯಿತು.
ತಹಶೀಲ್ದಾರ್ ಅರ್ಚನಾ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಬಂಟ್ವಾಳ ಜೈನ್ ಸಮಾಜದ ಪ್ರಮುಖರಾದ ಪಿ ಜಿನರಾಜ, ಸುದರ್ಶನ್ ಜೈನ್ ಪಂಜಿಕಲ್ಲು, ಸನ್ಮತಿ ಜಯಕೀರ್ತಿ, ಅಜಿತ್ ಕುಮಾರ್ ಜೈನ್, ಧನಂಜಯ ಜೈನ್, ಸಂತೋಷ್ ಕುಮಾರ್ ಜೈನ್, ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment