ಬಂಟ್ವಾಳ, ಎಪ್ರಿಲ್ 06, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸಹಸವಾರ, ಪ್ರಥಮ ಪಿಯುಸಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟು, ಸ್ಕೂಟರ್ ಹಾಗೂ ಅಟೋ ಸವಾರರಿಬ್ಬರು ಗಾಯಗೊಂಡ ಘಟನೆ ನರಿಕೊಂಬು ಗ್ರಾಮದ ದಿಡ್ಡು ಎಂಬಲ್ಲಿ ಶನಿವಾರ ಮಧ್ಯಾಹ್ನ ವೇಳೆ ನಡೆದಿದೆ.
ಮೃತ ಸ್ಕೂಟರ್ ಸಹಸವಾರನನ್ನು ಇಲ್ಲಿನ ನಿವಾಸಿ ಪವನ್ (17) ಎಂದು ಗುರುತಿಸಲಾಗಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ದೀಪಕ್ ಬಿ ಹಾಗೂ ಅಟೋ ಚಾಲಕ ಜಾಬೀರ್ ಎಂದು ಹೆಸರಿಸಲಾಗಿದೆ.
ದೀಪಕ್ ಹಾಗೂ ಪವನ್ ಅವರು ಸ್ಕೂಟರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಜಾಬೀರ್ ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸವಾರರು ಹಾಗೂ ಅಟೋ ಚಾಲಕ ಮೂವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ. ಈ ಪೈಕಿ ಗಂಭೀರ ಗಾಯಗೊಂಡಿದ್ದ ಪವನ್ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಗಾಯಾಳುಗಳು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ. ಮೃತ ಪವನ್ ಬಿ ಮೂಡ ಸರಕಾರಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ನರಿಕೊಂಬು ನಿವಾಸಿ ಪುರುಷೋತ್ತಮ ಸಾಲಿಯಾನ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment