ಸುಳ್ಯ, ಎಪ್ರಿಲ್ 19, 2024 (ಕರಾವಳಿ ಟೈಮ್ಸ್) : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣ ಎದುರು ಬುಧವಾರ ಸಂಜೆ ನಡೆದಿದೆ.
ಮೃತ ಪಾದಚಾರಿಯನ್ನು ಅಜ್ಜಾವರ ಗ್ರಾಮದ ಕರಿಯಮೂಲೆ ನಿವಾಸಿ ಗೋಪಾಲ ಮುಗೇರ (57) ಎಂದು ಹೆಸರಿಸಲಾಗಿದೆ. ಇವರು ಬುಧವಾರ ಸಂಜೆ ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ಸು ನಿಲ್ದಾಣದ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಪೈಚಾರು ಕಡೆಯಿಂದ ಗಾಂಧಿನಗರ ಕಡೆಗೆ ಆದಂ ಅಜ್ಮಲ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment