ಮಂಗಳೂರು, ಎಪ್ರಿಲ್ 13, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಮೊಡಂಕಾಪಿನಲ್ಲಿರುವ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತ ಯಂತ್ರಗಳ ಕಮಿಷನಿಂಗ್ ಕಾರ್ಯ ಶನಿವಾರ ನಡೆಯಿತು.
ಈ ಸಂದರ್ಭ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಕಮಿಷನಿಂಗ್ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು. ಪೂರ್ವಾಹ್ನ 6 ಗಂಟೆಯಿಂದಲೇ ಕರ್ತವ್ಯ ನಿರತರಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಾವೇ ಸ್ವತಃ ಜಿಲ್ಲಾಧಿಕಾರಿಗಳೇ ಮಧ್ಯಾಹ್ನದ ಊಟವನ್ನು ಬಡಿಸಿ ಅಧಿಕಾರಿಗಳ ಚುನಾವಣಾ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
205-ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ ಉದಯ ಶೆಟ್ಟಿ, ಚುನಾವಣಾ ನೋಡಲ್ ಅಧಿಕಾರಿ ರಾಜು ಮೋಗವೀರ, ತಹಶೀಲ್ದಾರ್ ಅರ್ಚನಾ ಭಟ್, ಸೆಕ್ಟರ್ ಅಧಿಕಾರಿಗಳು, ಚುನಾವಣಾ ಉಪತಹಶೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಶೀಲ್ದಾರ್ ದಿವಾಕರ ಮುಗಳಿಯ, ವಿಷಯ ನಿರ್ವಾಹಕ ಮಂಜುನಾಥ ಕೆ ಎಚ್, ಕಂದಾಯ ನಿರೀಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಈ ಸಂದರ್ಭ ಭಾಗವಹಿಸಿದ್ದರು.
0 comments:
Post a Comment