ಬೆಳ್ತಂಗಡಿ, ಎಪ್ರಿಲ್ 08, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪ್ರಕರಣ ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಳು ಸಹಿತ ವಾಹನಗಳನ್ನು ವಶಪಡಿಸಿಕೊಂಡ ಘಟನೆ ಇಂದಬೆಟ್ಟು ಗ್ರಾಮದ ಬೆಳ್ಳೂರು ನದಿ ಕಿನಾರೆಯಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಇಂದಬೆಟ್ಟು ಗ್ರಾಮದ ಬೆಳ್ಳೂರು ನೇತ್ರಾವತಿ ನದಿ ಕಿನಾರೆಯಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳ್ಳತನ ಮಾಡಿ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸ್ ಠಾಣಾ ಪಿಎಸ್ಸೈ ಮುರಳೀಧರ್ ಕೆ ಜಿ ನೇತೃತ್ವದ ಪೊಲೀಸರು ಇಂದಬೆಟ್ಟು ನಿವಾಸಿಗಳಾದ ಡೀಕಯ್ಯ ಹಾಗೂ ರಿಯಾಜ್ ಎಂಬವರು ಅಕ್ರಮವಾಗಿ ಮರಳು ಕಳ್ಳತನ ಮಾಡಿ ಪಿಕಪ್ ಮೂಲಕ ಸಾಗಾಟ ಮಾಡಲು ಯತ್ನಿಸುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.
ಮರಳು ಕಳ್ಳತನ ಮಾಡುತ್ತಿದ್ದ ವಾಹನ ಹಾಗೂ ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಬಗ್ಗೆ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment