ಬಂಟ್ವಾಳ, ಮೇ 10, 2024 (ಕರಾವಳಿ ಟೈಮ್ಸ್) : 2024-25ನೇ ಸಾಲಿನಲ್ಲಿ ಪ್ರಥಮ ವರ್ಷದ ಡಿಪ್ಲೊಮಾ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸರಕಾರಿ ಪಾಲಿಟೆಕ್ನಿಕ್ ಗಳಲ್ಲಿ ಪ್ರಥಮ ಸೆಮಿಸ್ಟರ್ ಡಿಪ್ಲೊಮಾ ಪ್ರವೇಶಕ್ಕೆ ಮೆರಿಟ್ ಆಧಾರಿತವಾಗಿ ಈ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಹ ವಿದ್ಯಾರ್ಥಿಗಳು ತಾಂತ್ರಿಕ ಇಲಾಖೆಯ ವೆಬ್ ಸೈಟ್ ಮೂಲಕ ಮಾಹಿತಿ ಪುಸ್ತಕ ಡೌನ್ ಲೋಡ್ ಮಾಡಿಕೊಂಡು ಅದರಲ್ಲಿರುವ ಸೂಚನೆಗಳನ್ವಯ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ ಲೈನ್ ಅರ್ಜಿ ಸಲ್ಲಿಕೆಗೆ ಮೇ 21 ಅಂತಿಮ ದಿನಾಂಕವಾಗಿದೆ.
ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಸಿಬ್ಬಂದಿಗಳ ಸಹಾಯ ಪಡೆದುಕೊಳ್ಳಬಹುದು. ಈ ಬಗ್ಗೆ ಮಾಹಿತಿಗಾಗಿ ಕಚೇರಿ ಅಧೀಕ್ಷಕರ ಮೊಬೈಲ್ ಸಂಖ್ಯೆ 9449898414 ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ 0824-6816550ನ್ನು ಸಂಪರ್ಕಿಸಬಹುದು ಎಂದು ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
0 comments:
Post a Comment