ಬಂಟ್ವಾಳ, ಮೇ 03, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಹಾಗೂ ಅಟೋ ಚಾಲಕ ಗಾಯಗೊಂಡ ಘಟನೆ ಬಿ ಕಸಬಾ ಗ್ರಾಮದ ಬಸ್ತಿಪಡ್ಪು ಎಂಬಲ್ಲಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಗಾಯಾಳುಗಳನ್ನು ಬೈಕ್ ಸವಾರರಾದ ನಿತಿನ್, ಸಜೇಶ್ ಹಾಗೂ ಅಟೋ ಚಾಲಕ ದಿನೇಶ್ ಎಂದು ಹೆಸರಿಸಲಾಗಿದೆ. ನಿತಿನ್ ಹಾಗೂ ಸಜೇಶ್ ಅವರು ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಬಸ್ತಿಪಡ್ಪು ಎಂಬಲ್ಲಿ ದಿನೇಶ್ ಅವರು ಚಲಾಯಿಸುತ್ತಿದ್ದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರು ರಸ್ತೆಗೆ ಬಿದ್ದು ಗಾಯಗೊಂಡರೆ, ಅಟೋ ಚಾಲಕಗೆ ಕೂಡ ಸಣ್ಣಪುಟ್ಟ ಗಾಯವಾಗಿದೆ. ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ಈ ಪೈಕಿ ಬೈಕ್ ಸವಾರ ಸಜೇಶ್ ಅವರನ್ನು ಪ್ರಥಮ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment