ಬಂಟ್ವಾಳ, ಮೇ 10, 2024 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬಸವ ಜಯಂತಿ ಆಚರಣೆ ಬಿ ಸಿ ರೋಡು ಮಿನಿ ವಿಧಾನಸೌಧ ಆಡಳಿತ ಸೌಧ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಸಭಾಧ್ಯಕ್ಷತೆ ವಹಿಸಿದ್ದ ತಾಲೂಕು ತಹಶೀಲ್ದಾರ್ ಅರ್ಚನ ಭಟ್ ಅವರು 12ನೇ ಶತಮಾನದ ಸಾಮಾಜಿಕ ಕ್ರಾಂತಿಯ ರೂವಾರಿ ಬಸವಣ್ಣನವರು ತಮ್ಮ ವಚನಗಳಿಂದ ಸಮಾಜ ಸುಧಾರಣೆಯ ಕೆಲಸ ಮಾಡಿದವರು. ಕಾಯಕವೇ ಕೈಲಾಸ ಎಂದು ಮಾನವ ಕುಲಕ್ಕೆ ಸಂದೇಶವನ್ನು ಸಾರಿದ ವಿಶ್ವಗುರು ಬಸವಣ್ಣನವರಾಗಿದ್ದಾರೆ ಎಂದರು.
ಈ ಸಂದರ್ಭ ಉಪತಹಶೀಲ್ದಾರ್ ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಷು ಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಭಾಗವಹಿಸಿದ್ದರು.
0 comments:
Post a Comment