ಬೆಳ್ತಂಗಡಿ, ಮೇ 12, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟ ಪ್ರಕರಣವನ್ನು ಉಪ್ಪಿನಂಗಡಿ ಪೊಲೀಸರು ಬೇಧಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಅಕ್ರಮ ಜಾನುವಾರು ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಬಂದರು ಗ್ರಾಮದ ಮೈರೋತ್ತಡ್ಕ ನಿವಾಸಿ ರಕ್ಷಿತ್ (25) ಎಂದು ಹೆಸರಿಸಲಾಗಿದೆ. ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ಕೆಎ21 ಬಿ8892 ನೋಂದಣಿ ಸಂಖ್ಯೆಯ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ಠಾಣಾ ಪಿಎಸ್ಸೈ ಭರತ್ ಕುಮಾರ್ ವಿ ಅವರ ನೇತೃತ್ವದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಪಿಕಪ್ ವಾಹನವನ್ನು ಪೊಲೀಸರು ಪರಿಶೀಲನೆ ನಡೆಸಿದಾಗ ಮೂರು ಜಾನುವಾರುಗಳ ಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ತುಂಬಿರುವುದು ಕಂಡು ಬಂದಿದೆ. ಆರೋಪಿ ರಕ್ಷಿತ್ ನಲ್ಲಿ ಜಾನುವಾರುಗಳ ಬಗ್ಗೆ ವಿಚಾರಿಸಿದಾಗ ಯಾವುದೇ ಪರವಾ£ಗೆ ಇಲ್ಲದೇ ಅವುಗಳನ್ನು ಕಡಿದು ಮಾಂಸ ಮಾಡಲು ಸಾಗಾಟ ಮಾಡುವುದಾಗಿ ತಿಳಿಸಿರುತ್ತಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 57/2024, ಕಲಂ 5,7, ಮತ್ತು 12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020 ಮತ್ತು ಕಲಂ 11(ಡಿ) ಪ್ರಾಣಿ ಹಿಂಸಾ ತಡೆ ಕಾಯ್ದೆ ಮತ್ತು 34 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.
0 comments:
Post a Comment