ಬಂಟ್ವಾಳ, ಮೇ 02, 2024 (ಕರಾವಳಿ ಟೈಮ್ಸ್) : ಹೆದ್ದಾರಿ ಬದಿ ಬಸ್ಸಿಗಾಗಿ ಕಾಯುತ್ತಿದ್ದ ವೃದ್ದಗೆ ಬೈಕ್ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಫರಂಗಿಪೇಟೆ ಜಂಕ್ಷನ್ನಿನಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಗಾಯಗೊಂಡ ವ್ಯಕ್ತಿಯನ್ನು ಫರಂಗಿಪೇಟೆ ನಿವಾಸಿ ಶೇಖಬ್ಬ (71) ಎಂದು ಹೆಸರಿಸಲಾಗಿದೆ. ಇವರು ಫರಂಗಿಪೇಟೆ ಜಂಕ್ಷನ್ನಿನಲ್ಲಿ ಬುಧವಾರ ಮಧ್ಯಾಹ್ನ ಬಸ್ಸಿಗಾಗಿ ಕಾಯುತ್ತಿರುವಾಗದ ಹೆದ್ದಾರಿಯಲ್ಲಿ ಅಕ್ಷಯ್ ನಾಯ್ಕ ಎಂಬವರು ಸವಾರಿ ಮಾಡಿಕೊಂಡು ಬಂದ ಬೈಕ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment