ಗೂಡಿನಬಳಿ : ಅಟೋ ರಿಕ್ಷಾ ಹಿಂದಿನಿಂದ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಆಸ್ಪತ್ರೆಗೆ - Karavali Times ಗೂಡಿನಬಳಿ : ಅಟೋ ರಿಕ್ಷಾ ಹಿಂದಿನಿಂದ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಆಸ್ಪತ್ರೆಗೆ - Karavali Times

728x90

23 May 2024

ಗೂಡಿನಬಳಿ : ಅಟೋ ರಿಕ್ಷಾ ಹಿಂದಿನಿಂದ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಆಸ್ಪತ್ರೆಗೆ

ಬಂಟ್ವಾಳ, ಮೇ 23, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಹಿಂದಿನಿಂದ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ವ್ಯಕ್ತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿ ಸಿ ರೋಡು ಲಯನ್ಸ್ ಸೇವಾ ಮಂದಿರದ ಮುಂಭಾಗ ಗುರುವಾರ ಬೆಳಿಗ್ಗೆ ಸಂಭವಿಸಿದೆ. 

ಗಾಯಾಳು ಪಾದಚಾರಿ ವ್ಯಕ್ತಿಯನ್ನು ಗೂಡಿನಬಳಿ-ಎಂ ಕೆ ರೋಡು ನಿವಾಸಿ ಸಫ್ವಾನ್ (28) ಎಂದು ಹೆಸರಿಸಲಾಗಿದೆ. ಇವರು ಕೆಲಸದ ನಿಮಿತ್ತ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಅಬ್ದುಲ್ ಬಶೀರ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ರಸ್ತೆಗೆ ಬಿದ್ದ ಸಫ್ವಾನ್ ಅವರು ಗಾಯಗೊಂಡಿದ್ದು ತಕ್ಷಣ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳು ಸಫ್ವಾನ್ ಅವರ ಸಂಬಂಧಿ ಮೊಹಮ್ಮದ್ ತೌಸೀಫ್ ಎಂಬವರು ನೀಡಿದ ದೂರಿನ ಮೇರೆಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಗೂಡಿನಬಳಿ : ಅಟೋ ರಿಕ್ಷಾ ಹಿಂದಿನಿಂದ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಆಸ್ಪತ್ರೆಗೆ Rating: 5 Reviewed By: karavali Times
Scroll to Top