ಬೆಂಗಳೂರು, ಮೇ 02, 2024 (ಕರಾವಳಿ ಟೈಮ್ಸ್) : ಲೋಕಸಭಾ ಚುನಾವಣೆ ಇನ್ನೇನು ಚಾಲ್ತಿಯಲ್ಲಿರುತ್ತಲೇ ಕರ್ನಾಟಕ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ಗುರುವಾರ ಚುನಾವಣೆ ಘೋಷಿಸಿದ್ದು, ಚುನಾವಣಾ ದಿನಾಂಕ ಘೋಷಿಸಿದೆ.
ರಾಜ್ಯದ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಮತ್ತು ಮೂರು ಪದವೀಧರ ಕ್ಷೇತ್ರಗಳಿಗೆ ಈ ಚುನಾವಣೆ ಘೋಷಣೆಯಾಗಿದ್ದು, ಜೂನ್ 3 ರಂದು ಚುನಾವಣೆ ನಡೆಯಲಿದ್ದು, ಜೂನ್ 6 ರಂದು ಫಲಿತಾಂಶ ಘೋಷಣೆಯಾಗಲಿದೆ. ಜೂನ್ 3 ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ ಎಂದು ಆಯೋಗ ತಿಳಿಸಿದೆ.
ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಮೇ 16 ಕೊನೆಯ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಮೇ 20 ಕೊನೆಯ ದಿನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
0 comments:
Post a Comment