ಬಂಟ್ವಾಳ, ಮೇ 21, 2024 (ಕರಾವಳಿ ಟೈಮ್ಸ್) : ನೆಟ್ಲ ಮುಡ್ನೂರು ಗ್ರಾಮದ ಪರ್ಲೊಟ್ಟು ಎಂಬಲ್ಲಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿರುವ ಕಾರಿಗೆ ಮರ ಬಿದ್ದು ವಾಹನ ಚಾಲಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರಿಗೆ ಕಾರಿನಲ್ಲಿ ತೆರಳುತ್ತಿದ್ದ ಮಂಗಳೂರು ಮೂಲದ ನಾಲ್ವರು ಸಂಭಾವ್ಯ ಅಪಾಯದಿಂದ ಪಾರಾಗಿದ್ದಾರೆ. ಹೆದ್ದಾರಿಯಲ್ಲಿ ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಬಳಿಕ ಮರವನ್ನು ತೆರವುಗೊಳಿಸಲಾಗಿದ್ದು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕುರಿಯಾಳ ಗ್ರಾಮದ ದೊಂಪದ ಬಳಿ ಎಂಬಲ್ಲಿ ಗಾಳಿ ಮಳೆಗೆ ಲೈಟ್ ಕಂಬವು ಬಿದ್ದಿರುತ್ತದೆ. ಈ ಬಗ್ಗೆ ಮೆಸ್ಕಾಂ ಇಲಾಖಾ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಂಡಿದ್ದಾರೆ.
0 comments:
Post a Comment