ಬೆಂಗಳೂರು, ಮೇ 08, 2024 (ಕರಾವಳಿ ಟೈಮ್ಸ್) : ಕಳೆದ ಮಾರ್ಚ್-ಎಪ್ರಿಲ್ ತಿಂಗಳಲ್ಲಿ ನಡೆದಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಮೇ 9 ರ ಗುರುವಾರ ಪ್ರಕಟಗೊಳ್ಳಲಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ಶಿಕ್ಷಣ ಇಲಾಖಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಶಿಕ್ಷಣ ಇಲಾಖೆ ಅಧಿಕಾರಿಗಳ ಸುದ್ದಿಗೋಷ್ಠಿ ಬಳಿಕ ಇಲಾಖಾ ವೆಬ್ ಸೈಟ್ www.karresults.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಇಲಾಖಾಧಿ ಪ್ರಕಟಣೆ ತಿಳಿಸಿದೆ.
ಮಾರ್ಚ್ 25 ರಿಂದ ಎಪ್ರಿಲ್ 6 ವರೆಗೆ ಪರೀಕ್ಷೆಗಳು ನಡೆದಿತ್ತು. ಸುಮಾರು 8.20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
0 comments:
Post a Comment