ಬಂಟ್ವಾಳ, ಮೇ 12, 2024 (ಕರಾವಳಿ ಟೈಮ್ಸ್) : ಅಕ್ರಮ ಮರಳು ಸಾಗಾಟ ಪತ್ತೆ ಹಚ್ಚಿದ ಬಂಟ್ವಾಳ ನಗರ ಠಾಣಾ ಪೊಲೀಸರು ಮರಳು ಸಹಿತ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದು ಇಬ್ಬರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡ ಬಿ ಸಿ ರೋಡು ಮುಖ್ಯ ವೃತ್ತದ ಬಳಿ ಶನಿವಾರ ನಡೆದಿದೆ.
ಶನಿವಾರ ಬೆಳಿಗ್ಗಿನ ಜಾವ ಬಿ ಸಿ ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ಸರ್ಕಲ್ ಬಳಿ ಸಾಗುತ್ತಿದ್ದ ಕೆಎ21 ಸಿ2875 ಮತ್ತು ಕೆಎ21 ಬಿ3775 ನೋಂದಣಿ ಸಂಖ್ಯೆಯ ಎರಡು ಟಿಪ್ಪರ್ ಲಾರಿಗಳನ್ನು ಪರಿಶೀಲನೆಗಾಗಿ ಬಂಟ್ವಾಳ ನಗರ ಪೆÇಲೀಸ್ ಠಾಣಾ ಪಿಎಸ್ಸೈ ಆಂಜನೇಯ ರೆಡ್ಡಿ ಅವರು ತಡೆದು ನಿಲ್ಲಿಸಿ ಪರಿಶೀಲನೆ ನಡೆಸಿದಾಗ ಅಕ್ರಮ ಮರಳು ಸಾಗಾಟ ಕೃತ್ಯ ಬೆಳಕಿಗೆ ಬಂದಿದೆ.
ಯಾವುದೇ ಪರವಾನಿಗೆ ಪಡೆಯದೆ ಆರೋಪಿ ಲಾರಿ ಚಾಲಕರಾದ ಪುಣಚ ನಿವಾಸಿ ವಿಶ್ವಾಸ್ ಎಚ್ (25) ಹಾಗೂ ವಿಟ್ಲ ಕಸಬಾ ಗ್ರಾಮದ ನಿವಾಸಿ ಮುಹಮ್ಮದ್ ರಿಯಾಝ್ (31) ಅವರುಗಳು ವಳಚ್ಚಿಲ್ ಎಂಬಲ್ಲಿನ ನೇತ್ರಾವತಿ ನದಿಯಿಂದ ಮರಳು ತೆಗೆದು ತುಂಬಿಸಿ ಸಾಗಿಸುತ್ತಿರುವುದಾಗಿ ತಿಳಿದು ಬಂದಿರುತ್ತದೆ.
ಟಿಪ್ಪರ್ ಲಾರಿ ಹಾಗೂ ಮರಳನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment