ಬಂಟ್ವಾಳ, ಮೇ 07, 2024 (ಕರಾವಳಿ ಟೈಮ್ಸ್) : ಬಿ ಸಿ ರೋಡು ಬಸ್ ನಿಲ್ದಾಣದ ಬಳಿ ಇರುವ ಕೃಷ್ಣಿಮಾ ಹೋಟೇಲಿನ ರೂಮಿನಲ್ಲಿ ತಂಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ (30) ಎಂದು ಗುರುತಿಸಲಾಗಿದೆ. ಭಾನುವಾರ (ಮೇ 5) ಹೋಟೆಲ್ ಕೃಷ್ಣಿಮಾದಲ್ಲಿ ರೂಂ ಮಾಡಿದ್ದ ಈತ ಸೋಮವಾರ (ಮೇ 6) ರಾತ್ರಿ ಊಟ ಮಾಡಿ ರೂಮಿನ ಬಾಗಿಲು ಹಾಕಿಕೊಂಡಿದ್ದ. ಮಂಗಳವಾರ ಬೆಳಿಗ್ಗೆ ರೂಂ ಬಾಗಿಲು ತೆರೆಯದೆ ಇದ್ದು, ಹೋಟೆಲ್ ಸಿಬ್ಬಂದಿಗಳು ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೆÇೀಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರ ಸಮ್ಮುಖದಲ್ಲಿ ರೂಮಿನ ಬಾಗಿಲು ತೆರೆದಾಗ ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.
ಯುವಕನ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
0 comments:
Post a Comment