ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ ವಸಂತ ಬಂಗೇರ : ಸಿಎಂ ಸಿದ್ದರಾಮಯ್ಯ ಸಂತಾಪ
ಬೆಂಗಳೂರು, ಮೇ 08, 2024 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಸಂತಾಪ ಸೂಚಕ ಹೇಳಿಕೆ ಪೋಸ್ಟ್ ಮಾಡಿರುವ ಸಿಎಂ “ನನ್ನ ಆತ್ಮೀಯ ಗೆಳೆಯ ಮತ್ತು ದೀರ್ಘ ಕಾಲದ ಸಹದ್ಯೋಗಿ ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.”
“ನೇರ, ನಿಷ್ಠುರ ನಡೆ-ನುಡಿಯ ಬಂಗೇರ, ಆಂತರ್ಯದಲ್ಲಿ ಅಪಾರವಾದ ಜನಪರ ಕಾಳಜಿ ಮತ್ತು ಸ್ನೇಹನಿಷ್ಠೆಯನ್ನು ಹೊಂದಿದ್ದ ದೊಡ್ಡ ಮನುಷ್ಯ.”
“ಅನಾರೋಗ್ಯದಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದ ಬಂಗೇರ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಮಾತನಾಡಿಸಿದ್ದೆ. ಇಷ್ಟು ಬೇಗ ನಮ್ಮನ್ನು ಅಗಲಿ ಹೋಗುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ. ಬಂಗೇರ ಅವರ ಕುಟುಂಬದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.” ಎಂದು ಸಿಎಂ ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ಹೇಳಿಕೊಂಡಿದ್ದಾರೆ.
0 comments:
Post a Comment