ಮಂಗಳೂರು, ಮೇ 08, 2024 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ ಅವರ ನಿಧನಕ್ಕೆ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ, ಬೆಳ್ತಂಗಡಿಯ ಐದು ಬಾರಿಯ ಶಾಸಕರಾಗಿದ್ದ ಕೆ ವಸಂತ ಬಂಗೇರ ಅವರು ನಿಧನರಾಗಿದ್ದು, ತೀವ್ರ ಸಂತಾಪ ವ್ಯಕ್ತಪಡಿಸುತ್ತೇನೆ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಕುಟುಂಬ ವರ್ಗದವರಿಗೆ ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸ್ಪೀಕರ್ ಖಾದರ್ ಅವರು ತಮ್ಮ ಸಂತಾಪ ಸೂಚಕ ಹೇಳಿಕೆಯಲ್ಲಿ ತಿಳಿಸಿದ್ದಾರೆ.
0 comments:
Post a Comment