ಬಂಟ್ವಾಳ, ಮೇ 25, 2024 (ಕರಾವಳಿ ಟೈಮ್ಸ್) : ಪಿಕಪ್ ವಾಹನಕ್ಕೆ ಎದುರಿನಿಂದ ಹಾಗೂ ಹಿಂದಿನಿಂದ ಎರಡು ಬೈಕುಗಳು ಡಿಕ್ಕಿ ಹೊಡೆದು ಇಬ್ಬರು ಸವಾರರು ಗಾಯಗೊಂಡ ಘಟನೆ ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿನ ಬಿ ಸಿ ರೋಡು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರರನ್ನು ಗುಣವಂತ ಹಾಗೂ ಶಮೀರ್ ಎಂದು ಹೆಸರಿಸಲಾಗಿದೆ. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುದ್ದೊಟ್ಟು ನಿವಾಸಿ ಅನಿಲ್ ಕುಮಾರ್ ಪಿ (32) ಎಂಬವರು ತನ್ನ ಪಿಕಪ್ ವಾಹನದಲ್ಲಿ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಬಿ ಸಿ ರೋಡು-ಕಡೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಸಂಚರಿಸುತ್ತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಗುಣವಂತ ಅವರು ಚಲಾಯಿಸಿಕೊಂಡು ಬಂದ ಬೈಕ್ ಪಿಕಪ್ ವಾಹನಕ್ಕೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾನೆ. ಇದೇ ವೇಳೆ ಪಿಕಪ್ ವಾಹನದ ಹಿಂದಿನಿಂದ ಬರುತ್ತಿದ್ದ ಶಮೀರ್ ಚಲಾಯಿಸುತ್ತಿದ್ದ ಬೈಕ್ ಪಿಕಪ್ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಎರಡೂ ಬೈಕ್ ಸವಾರರು ಬೈಕ್ ಸಮೇತ ರಸ್ತೆಗೆಸೆಯಲ್ಪಟ್ಟು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
0 comments:
Post a Comment