ಬೆಳ್ತಂಗಡಿ, ಮೇ 19, 2024 (ಕರಾವಳಿ ಟೈಮ್ಸ್) : ಅಕ್ರಮ ಗಣಿಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇತೃತ್ವದ ಅಧಿಕಾರಿಗಳ ತಂಡ ಗಣಿಗಾರಿಕೆಗೆ ಬಳಸಿದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಆರೋಪಿಗಳ ಪೈಕು ರೌಡಿ ಶೀಟರ್ ಒಬ್ಬನನ್ನು ವಶಕ್ಕೆ ಪಡೆದುಕೊಂಡ ಘಟನೆ ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ಶನಿವಾರ ನಡೆದಿದೆ.
ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಶನಿವಾರ ಬೆಳ್ತಂಗಡಿ ತಾಲೂಕು, ಮೇಲಂತಬೆಟ್ಟು ಗ್ರಾಮದ ಮೂಡಲ ಎಂಬಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ, ಗ್ರಾಮ ಸಹಾಯಕ, ತಾಲೂಕು ಕಛೇರಿ ಸಿಬ್ಬಂದಿಗಳು ಹಾಗೂ ಬೆಳ್ತಂಗಡಿ ಠಾಣಾ ಪಿಎಸ್ಸೈ ನೇತೃತ್ವದ ಪೊಲೀಸರೊಂದಿಗೆ ಸ್ಥಳಕ್ಕೆ ದಾಳಿ ನಡೆಸಿರುತ್ತಾರೆ. ಸ್ಥಳದಲ್ಲಿ ಅಕ್ರಮ ಗಾಣಿಗಾರಿಕೆಯಿಂದ ತೆಗೆದಿರುವ ಕಲ್ಲುಗಳ ರಾಶಿ, ಹಿಟಾಚಿ, ಟ್ರಾಕ್ಟರ್, 4 ಜೀವಂತ ಮದ್ದು ಗುಂಡುಗಳು ಹಾಗೂ ಬಳಕೆಯಾಗಿರುವ 4 ಮದ್ದುಗುಂಡು ಪತ್ತೆಯಾಗಿರುತ್ತದೆ.
ಸ್ಥಳದಲ್ಲಿದ್ದ ಕಾರ್ಮಿಕರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಸದ್ರಿ ಅಕ್ರಮ ಗಣಿಗಾರಿಕೆಯನ್ನು ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಎಂಬವರುಗಳು ನಡೆಸುತ್ತಿರುವುದು ತಿಳಿದುಬಂದಿರುತ್ತದೆ. ಸ್ಥಳದಲ್ಲಿದ್ದ ಸ್ಪೋಟಕಗಳನ್ನು ಹಾಗು ಇತರೆ ಸೊತ್ತುಗಳನ್ನು ವಶಕ್ಕೆ ಪಡೆದು, ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಎಂಬವರುಗಳ ವಿರುದ್ಧ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 56/2024, ಕಲಂ 9ಬಿ(1)(ಬಿ) ಸ್ಫೋಟಕ ಕಾಯ್ದೆ 1884 ಕಲಂ 5 ದಿ ಎಕ್ಸ್ಪೋಸಿವ್ ಸಬ್ ಸ್ಟ್ಯಾನ್ಸ್ ಆಕ್ಟ್-1908 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಆರೋಪಿಗಳ ಪೈಕಿ ಬೆಳ್ತಂಡು ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿರುವ ಶಶಿರಾಜ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪರ ವಕಾಲತ್ತಿಗಾಗಿ ಪೊಲೀಸ್ ಠಾಣೆಗೆ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ರಾತ್ರಿವರೆಗೂ ಠಾಣೆಯಲ್ಲಿ ಕೂತು ಪ್ರತಿಭಟನೆ ನಡೆಸಿದ್ದಲ್ಲದೆ ಆರೋಪಿಗಳ ಬಿಡುಗಡೆಗೆ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಪೊಲೀಸರು ಶಾಸಕರ ಬೇಡಿಕೆಗೆ ಮಣೆ ಹಾಕದೆ ಇದ್ದ ಹಿನ್ನಲೆಯಲ್ಲಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಗಳಿಗೆ ಶಾಸಕರು ಆವಾಜ್ ಹಾಕಿದ ಘಟನೆಯೂ ನಡೆದಿದ್ದು, ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
0 comments:
Post a Comment