ವಿಟ್ಲ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times ವಿಟ್ಲ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ - Karavali Times

728x90

29 June 2024

ವಿಟ್ಲ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಜೂನ್ 29, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಕಸಬಾ ಗ್ರಾಮದ ಎಂಪಾಯರ್ ಮಾಲ್ ಬಳಿ ಸಂಭವಿಸಿದೆ.

ಗಾಯಗೊಂಡ ಬೈಕ್ ಸವಾರನನ್ನು ಲೋಕಪ್ಪ ಗೌಡ ಎಂದು ಹೆಸರಿಸಲಾಗಿದೆ. ಇವರು ವಿಟ್ಲ-ಕಬಕ ರಸ್ತೆಯಲ್ಲಿ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ವಿಟ್ಲ ಎಂಪಾಯರ್ ಮಾಲ್ ಬಳಿ ಅನ್ವರ್ ಸಾದಿಕ್ ಎಂಬವರು ಚಲಾಯಿಸಿಕೊಂಡು ಬಂದ ಅಟೊ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ಗಾಯಗೊಂಡ ಲೋಕಪ್ಪ ಗೌಡ ಅವರನ್ನು ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗಾಯಾಳು ಲೋಕಪ್ಪ ಗೌಡ ಅವರ ಸಹೋದರ ಕೃಷ್ಣಪ್ಪ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲ : ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top