ಬಿ.ಸಿ.ರೋಡು : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ - Karavali Times ಬಿ.ಸಿ.ರೋಡು : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ - Karavali Times

728x90

16 June 2024

ಬಿ.ಸಿ.ರೋಡು : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ

ಬಂಟ್ವಾಳ, ಜೂನ್ 17, 2024 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ರೈಲ್ವೆ ಬ್ರಿಡ್ಜ್ ಬಳಿ ಭಾನುವಾರ ಸಂಜೆ ಸಂಭವಿಸಿದೆ. 

ಗಾಯಗೊಂಡ ಸ್ಕೂಟರ್ ಸವಾರನನ್ನು ಬಿ ಮೂಡ ಗ್ರಾಮದ ನಿವಾಸಿ ಕೃಷ್ಣಪ್ಪ ಕುಲಾಲ್ (75) ಎಂದು ಹೆಸರಿಸಲಾಗಿದೆ. ಇವರು ತಮ್ಮ ಸ್ಕೂಟರಿನಲ್ಲಿ ಉಮೇಶ್ ಅವರನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಸಂಚರಿಸುತ್ತಿದ್ದ ವೇಳೆ ಬಿ ಮೂಡ ಗ್ರಾಮದ ರೈಲ್ವೆ ಬ್ರಿಡ್ಜ್ ಬಳಿ ಮುಹಮ್ಮದ್ ಅಸ್ಪಕ್ ಅವರು ಚಲಾಯಿಸಿಕೊಂಡು ಬಂದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸವಾರ ಕೃಷ್ಣಪ್ಪ ಕುಲಾಲ್ ಅವರಿಗೆ ಗಾಯವಾಗಿದ್ದು, ಸಹಸವಾರ ಉಮೇಶ್ ಅವರಿಗೆ ಯಾವುದೇ ಗಾಯಗಳಾಗಿರುವುದಿಲ್ಲ. 

ಗಾಯಾಳು ಕೃಷ್ಣಪ್ಪ ಅವರನ್ನು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಆಸ್ಪತ್ರೆಗೆ Rating: 5 Reviewed By: karavali Times
Scroll to Top